News Karnataka Kannada
Saturday, May 04 2024
ವಿಜಯಪುರ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ : ನಿವೃತ್ತ ಡಿವೈಎಸ್ಪಿ ಹುಣಶಿಕಟ್ಟಿ

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ ಹೇಳಿದರು.
Photo Credit : NewsKarnataka

ವಿಜಯಪುರ : ಜವಾಬ್ದಾರಿಯುತ ಹಿರಿಯ ನಾಗರಿಕನಾಗಿ ದೇಶದ ರಕ್ಷಣೆ, ಅಭಿವೃದ್ಧಿ ನನಗೆ ಮುಖ್ಯ. ಹಾಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ‌ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿಯವರನ್ನು‌ ಬೆಂಬಲಿಸಿ, ರಾಷ್ಟ್ರ ರಕ್ಷಣೆ, ಪ್ರಗತಿಗಾಗಿ ಜಗಮೆಚ್ಚಿದ ನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ ಹೇಳಿದರು.

ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿ, ನಾನು ಸುಮಾರು 30 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ನಿವೃತ್ತಿಯ ನಂತರವೂ ಸಮಾಜಮುಖಿ ಕೆಲಸಕ್ಕೆ ತೊಡಗಿಕೊಳ್ಳಬೇಕೆಂಬ ಉದ್ದೇಶದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿದ್ದೆ.

ಆಗ ನಮ್ಮ‌ ಸಮುದಾಯದ ಅನೇಕ‌ ಹಿರಿಯರು ಆಗಮಿಸಿ ಕಳೆದ ಹತ್ತು ವರ್ಷಗಳಲ್ಲಿ ಮೋದಿಯವರ ಆಡಳಿತದಲ್ಲಿ ದೇಶದಲ್ಲಾದ ಅನೇಕ ಅಭಿವೃದ್ಧಿ ಕಾರ್ಯಗಳು, ಬದಲಾವಣೆಗಳ ಬಗ್ಗೆ ಚರ್ಚಿಸಿ ಪ್ರಸ್ತುತ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಅವಶ್ಯಕತೆ ಬಗ್ಗೆ ವಿವರಿಸಿದರು. ಅವರೆಲ್ಲಾ ಒತ್ತಾಸೆಯಂತೆ ಹಾಗೂ ನಾನು ಸಹ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಇದಕ್ಕೆ‌ ಬೆಂಬಲ ವ್ಯಕ್ತಪಡಿಸಿ ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದೇನೆ ಎಂದರು.

ಕಾಂಗ್ರೇಸ್ ಪಕ್ಷದಲ್ಲಿ ಸಂಸ್ಕಾರವಿಲ್ಲ, ನಾಯಕರಲ್ಲಿ ಅಧಿಕಾರದ ಹಪಹಪಿತನ ಹೆಚ್ಚಾಗಿದೆ. ಹಿಂದೆ ಸಿಎಂಗಳಾಗಿದ್ದ ಎಸ್.ಎಂ.ಕೃಷ್ಣ, ಜೆ.ಹೆಚ್.ಪಟೇಲರು, ವಿರೇಂದ್ರ ಪಾಟೀಲರು, ರಾಮಕೃಷ್ಣ ಹೆಗ್ಡೆ ಹೀಗೆ ಅನೇಕ‌ ಸಜ್ಜನ ರಾಜಕಾರಣಿಗಳು ಮಾತನಾಡುತ್ತಿದ್ದರೆ ಮುತ್ತು ರತ್ನಗಳು ಉದುರಿದಂತೆ ಮಾತುಗಳು ಹೊರಬರುತ್ತಿದ್ದವು.

ಆದರೆ ಈಗಿನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಅವರ ಅಹಂಕಾರ, ದುರಾಹಂಕಾರದ ಮಾತುಗಳು ಕೇಳಿದರೆ ತೀವ್ರ ಬೇಸರವಾಗುತ್ತದೆ. ದಿನಬೆಳಗಾದರೆ ಕಾಂಗ್ರೆಸ್ ನವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದವರೇ ಕಾಂಗ್ರೆಸ್ ನವರು. ಅಂಬೇಡ್ಕರ್ ಅವರು ಮೃತಪಟ್ಟಾಗ ಅವರ ಶವಸಂಸ್ಕಾರಕ್ಕೂ ಬರದೇ, ಅಂತ್ಯಕ್ರಿಯೆಗೆ ಜಾಗ ನೀಡಲಿಲ್ಲ, ಭಾರತದ ಸಂವಿಧಾನ ಶಿಲ್ಪಿಯಾಗಿರುವ ಅಂಬೇಡ್ಕರ್ ಅವರಿಗೆ ಭಾರತರತ್ನ ಸಹ ನೀಡಿಲ್ಲ. ಭವಿಷ್ಯಕ್ಕೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದರು.

ಮುಖಂಡ ಹನುಮಂತ ಬಿರಾದಾರ ಮಾತನಾಡಿ, ಜಿಲ್ಲೆಯ ಅಜಾತಶತ್ರು, ಜಾತ್ಯಾತೀತ ರಾಜಕಾರಣಿ ರಮೇಶ ಜಿಗಜಿಣಗಿ ಅವರು ಇಷ್ಟು ವರ್ಷ ರಾಜಕಾರಣ ಮಾಡಿದರೂ‌ ಯಾರಿಗೂ ತೊಂದರೆ ಕೊಟ್ಟವರಲ್ಲ, ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ಜಿಲ್ಲೆಯ ಅಭಿವೃದ್ಧಿಗೆ‌ ಒಂದು ಲಕ್ಷ‌ ಕೋಟಿಯಷ್ಟು ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಎಂದು ಪ್ರಚಾರ ಪಡೆದವರಲ್ಲ. ಹಾಗಾಗಿ ಅಂತಹ ರಾಜಕಾರಣಿ‌ ಮತ್ತೊಮ್ಮೆ‌ ಆರಿಸಿ‌ ಬಂದು‌ ನರೇಂದ್ರ‌ ಮೋದಿಯವರ ಕೈ ಬಲಪಡಿಸಬೇಕಿದೆ. ನಾವೆಲ್ಲಾ ಅವರ ಗೆಲುವಿಗೆ ಟೊಂಕಕಟ್ಟಿ ಕಂಕಣಬದ್ಧರಾಗಿದ್ದೇವೆ ಎಂದರು. ಈ ವೇಳೆ ಮುಖಂಡ ಶರಣು ಬ್ಯಾಳಿ ವಿಜಯ ಜೋಶಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು