Categories: ವಿಜಯಪುರ

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ವಿಜಯಪುರ :ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಏ. 29 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ.

ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಪ್ರಚಾರಕ್ಕೆ ಮೆರುಗು ನೀಡಲಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮಾಹಿತಿ ನೀಡಿದರು.

ಏ.29 ರಂದು ಬೆಳಿಗ್ಗೆ 11 ಗಂಟೆಗೆ ಬಾಗಲಕೋಟೆ ನವನಗರದ ತೋಟಗಾರಿಕಾ ವಿವಿ ಆವರಣದಲ್ಲಿ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ‌ ಮೋದಿಯವರು ಅವಳಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಬಲ ತುಂಬಲಿದ್ದಾರೆ.

ಅವಳಿ ಜಿಲ್ಲೆಯ ಬಿಜೆಪಿ‌ ಅಭ್ಯರ್ಥಿಗಳಾದ ರಮೇಶ ಜಿಗಜಿಣಗಿ ಹಾಗೂ ಪಿ.ಸಿ.ಗದ್ದಿಗೌಡರ ಸೇರಿದಂತೆ ಅನೇಕ ಭಾಜಪ ಹಾಗೂ ಜೆಡಿಎಸ್ ಪ್ರಮುಖರು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನೂ ಎಲ್ಲೆಡೆ ಚುನಾವಣಾ ಕಾವು ಜೋರಾಗಿದ್ದು, ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಜನರಿಂದ ಬಿಜೆಪಿ ಪರ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ. ವಿಕಸಿತ ಭಾರತ ಸಂಕಲ್ಪ ಸಾಕಾರಗೊಳಿಸಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ.

ಈ ಸಭೆಗೆ ವಿಜಯಪುರ ಜಿಲ್ಲೆಯಿಂದ ಸುಮಾರು 25-30 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ. ಜಿಲ್ಲೆ ಎಲ್ಲಾ ಕಾರ್ಯಕರ್ತರು, ಬಿಜೆಪಿ ಬೆಂಬಲಿಗರು, ಮೋದಿಯವರ ಹಿತೈಸಿಗಳು ಅಭಿಮಾನಿಗಳು ಅತಿ‌ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆರ್.ಎಸ್.ಪಾಟೀಲ್ ಕುಚಬಾಳ ಮನವಿ ಮಾಡಿಕೊಂಡರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಸಂಜಯ ಪಾಟೀಲ ಕನಮಡಿ, ಜಿಲ್ಲಾ ಕೋಶಾಧ್ಯಕ್ಷ ಭೀಮಾಶಂಕರ ಹದನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬೂ ಮಾಶ್ಯಾಳ, ಮಹಿಳಾ ಮುಖಂಡರಾದ ಮಲ್ಲಮ್ಮ ಜೋಗೂರ, ಮಾಧ್ಯಮ ಪ್ರಮುಖ ವಿಜಯ್ ಜೋಶಿ ಉಪಸ್ಥಿತರಿದ್ದರು.

Chaitra Kulal

Recent Posts

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

19 seconds ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

14 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

26 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

29 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

35 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

41 mins ago