Categories: ವಿಜಯಪುರ

ನೇಹಾಳ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ವಿಜಯಪುರ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಪಯಾಜ್  ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಯಿತು.

ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ.

ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ.

ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು.

ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯವ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಅ ಗೆ ಹಸ್ತಾಂತರ ಮಾಡಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.

Chaitra Kulal

Recent Posts

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

20 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

43 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

1 hour ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

1 hour ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

9 hours ago