News Karnataka Kannada
Monday, April 29 2024
ವಿಜಯಪುರ

ಇದು ಕೆಜೆಪಿ ಪಾರ್ಟಿ 2, ಬಿಜೆಪಿ ರಾಜ್ಯ ಘಟಕದ ಪಟ್ಟಿಗೆ ಯತ್ನಾಳ್‌ ವ್ಯಂಗ್ಯ

New Project 2023 12 24t092220.512
Photo Credit : News Kannada

ವಿಜಯಪುರ: ವಿಜಯಪುರದ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ರಾಜ್ಯ ಘಟಕದ ವಿರುದ್ಧ ನಿಗಿನಿಗಿ ಕೆಂಡದಂತಹ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದರು. ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು.

ಸಾರ್ವಜನಿಕ ಕೆಲಸ ಮಾಡಲು, ಕ್ರಾಂತಿ ಮಾಡಲು ಅಧಿಕಾರ ಬೇಕಾಗಿಲ್ಲ ಮತ್ತು ಇದು ಕೊನೆಯಲ್ಲ. 2028ಕ್ಕೆ ಮತ್ತೆ ಕ್ಷೇತ್ರ ಮರು ವಿಂಗಡನೆ ಆಗಲಿದೆ. ವಿಜಯಪುರದ ಲೋಕಸಭಾ ಸ್ಥಾನ ಮೂರು ಆಗಲಿದ್ದು, ಲೋಕಸಭೆಯ ಸ್ಥಾನ 900 ಆಗಲಿದೆ. ಕರ್ನಾಟಕ ವಿಧಾನಸಭೆ 290 ಸ್ಥಾನಕ್ಕೆ ಏರಿಕೆ ಆಗಲಿದೆ. ಆಗ ಏನೇನು ಆಗುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು