Categories: ವಿಜಯಪುರ

ಗರ್ಭಿಣಿಯ ಮರ್ಯಾದೆ ಗೇಡು ಹತ್ಯೆ: ಇಬ್ಬರು ಆರೋಪಿಗಳಿಗೆ 4.19 ಲಕ್ಷ ರೂ. ದಂಡ, ಗಲ್ಲು ಶಿಕ್ಷೆ

ವಿಜಯಪುರ: ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಇಬ್ರಾಹಿಂಸಾಬ್ ಅತ್ತಾರ, ಅಕ್ಬರಸಾಬ್ ಅತ್ತಾರ ಗಲ್ಲು ಶಿಕ್ಷೆಗೆ ಒಳಗಾದವರು. ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ರಮಜಾನಭೀ ಅತ್ತಾರ, ದಾವಲಭೀ ಜಮಾದಾರ್, ಅಜಮಾ ದಖನಿ, ಜಿಲಾನಿ‌ ದಖನಿ, ಅಬ್ದುಲ್ ಖಾದರ್ ದಖನಿ, ದಾವಲಭಿ ಧನ್ನೂರಗೆ ಜೀವಾವಧಿ‌ ಶಿಕ್ಷೆಗೆ ಒಳಗಾದವರು. ಇವರಿಗೆ 4.19 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕಳೆದ 2017 ರಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಾಳಾಗುಂಡಕನಾಳ ಗ್ರಾಮದಲ್ಲಿ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ನಡೆದಿತ್ತು. ಪ್ರಕರಣ ಬೆನ್ನತ್ತಿದ ತಾಳಿಕೋಟೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದರು.

ಹಾಳಗುಂಡಕನಾಳ ಗ್ರಾಮದ ಬಾನು ಬೇಗಂ ಅತ್ತಾರ್ ಹಾಗೂ ಸಾಹೇಬಣ್ಣ ಕೊಣ್ಣೂರ ಎಂಬವರು 2017 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇದು ಬಾನುಬೇಗಂ ಮನೆಯವರ ಕೆಂಗಣ್ಣಿಗೆ ಗುರಿಯಾಗಿತ್ತು. ಮದುವೆಯಾದ ಬಳಿಕ ಬೇರೆ ನಗರದಲ್ಲಿ ಬಾನುಬೇಗಂ ಹಾಗೂ ಸಾಹೇಬಣ್ಣ ವಾಸವಿದ್ದರು.

ಈ ವೇಳೆ ಬಾನುಬೇಗಂ ಗರ್ಭಿಣಿಯಾದ ಕಾರಣ ಹೆರಿಗೆಗಾಗಿ ಗಂಡನ ಮನೆಗೆ ಬಂದಿದ್ದಳು. ಇದನ್ನೇ ಕಾಯುತ್ತಿದ್ದ ಆಕೆಯ ಪೋಷಕರು ಬಾನುಬೇಗಂ ಹಾಗೂ ಸಾಹೇಬಣ್ಣರನ್ನ ಕೊಲೆ ಮಾಡಲು ಮುಂದಾಗಿದ್ದರು. ಪತಿ ಮತ್ತು ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾಗಿ ಬಾನುಬೇಗಂ ಮೂರ್ಚೆ ಹೋಗಿದ್ದಳು. ಮೂರ್ಚೆ ಹೋದ ಗರ್ಭಿಣಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿತ್ತು. ಈ ವೇಳೆ ಹಲ್ಲೆಕೋರರಿಂದ ಸಾಹೇಬಣ್ಣನನ್ನು ರಕ್ಷಣೆ ಮಾಡಲಾಗಿತ್ತು.

ಬಾನುಬೇಗಂ ತಂದೆ-ತಾಯಿ ಹಾಗೂ ಅವರ ಸಂಬಂಧಿಕರು ಈ ಕೃತ್ಯ ಎಸಗಿದ್ದರು. ಈ ಪ್ರಕರಣ ಕುರಿತು ತನಿಖೆ ನಡೆಸಿ ತಾಳಿಕೋಟೆ ಪೊಲೀಸರು ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ್ದರು. ಸುದೀರ್ಘವಾದ ವಿವಾದ ಆಲಿಸಿದ ನ್ಯಾಯಾಧೀಶ ಸತೀಶ್ ಎಲ್.ಪಿ ಅವರಿಂದ ಆದೇಶ ಹೊರಬಿದ್ದಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಎಸ್ ಲೋಕೂರ ವಾದ ಮಂಡಿಸಿದ್ದರು.

Chaitra Kulal

Recent Posts

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

5 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

41 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

59 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago