Categories: ವಿಜಯಪುರ

ವಿಜಯಪುರ: ನಾಗಠಾಣ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ ಎಂದ ಜನಾರ್ದನ ರೆಡ್ಡಿ

ವಿಜಯಪುರ: ನಾಗಠಾಣ ಮತ ಕ್ಷೇತ್ರದ ಮೂಲಭೂತ ಸೌಕರ್ಯ ವಂಚಿತ ನಾಗಠಾಣ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಕನಸು,ಈ ಕ್ಷೇತ್ರವನ್ನು ನವನಾಗಠಾಣವನ್ನಾಗಿಸಲು ನಮ್ಮ ಪಕ್ಷದ ಅಭ್ಯರ್ಥಿ ಶ್ರೀಕಾಂತ ಬಂಡಿ ಬದ್ಧರಾಗಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಆಯೋಜಿಸಲಾದ ನವ ನಾಗಠಾಣ ಸಮಾವೇಶ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಗಠಾಣ ಮತಕ್ಷೇತ್ರದ ಅಭ್ಯರ್ಥಿ ಶ್ರೀಕಾಂತ ಬಂಡಿ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಬಸವೇಶ್ವರರು ಜನಿಸಿದ ಹಾಗೂ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ನಡೆದಾಡಿದ ಈ ಜಿಲ್ಲೆ ಅಭಿವೃದ್ಧಿ ವಂಚಿತವಾಗಿದೆ. ತಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ವಿಜಯಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದೇನೆ.

ಬಸವಣ್ಣನವರ ಜನ್ಮ ಸ್ಥಳ ಬಾಗೇವಾಡಿ, ಐಕ್ಯ ಸ್ಥಳ ಕೂಡಲ ಸಂಗಮದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದೇನೆ.ತಮ್ಮ ಪಕ್ಷದ ಪ್ರಣಾಳಿಕೆ ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುತ್ತದೆ ಎಂದ ಅವರು ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಶ್ರೀಕಾಂತ ಬಂಡಿ ಅವರನ್ನು ನಾಗಠಾಣ ಘೋಷಣೆ ಮಾಡುತ್ತಿದ್ಧೆನೆ. ಅವರಿಗೆ ನಿಮ್ಮ ಬೆಂಬಲ ನೀಡಿ ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ನಾಗಠಾಣ ಮತಕ್ಷೇತ್ರದ ಅಭ್ಯರ್ಥಿ ಶ್ರೀಕಾಂತ ಬಂಡಿ ಮಾತನಾಡಿ,ಸ್ವಾಂತಂತ್ರ್ಯ ಸಿಕ್ಕು 75 ವರ್ಷಗತಿಸಿದರೂ ಈ ಕ್ಷೇತ್ರ ಅಭೀವೃದ್ಧಿಯಾಗಿಲ್ಲ. ಉತ್ತಮ ರಸ್ತೆಗಳಿಲ್ಲ,ಚರಂಡಿ, ಶೌಚಾಲಯಳು,ಶುದ್ಧ ಕುಡಯುವ ನೀರು ಪುರೈಕೆ ಮರೀಕೆಯಾಗಿವೆ. ಗ್ರಾಮೀಣ ಭಾಗದಲ್ಲಿ ಬಸ್‌ ವ್ಯವಸ್ಥೆ ಇಲ್ಲ.ಮೂಲಭೂತ ಸೌಕರ್ಯಗಳನ್ನು ಒದಗಿಸಿ ನವ ನಾಗಠಾಣ ಮತಕ್ಷೇತ್ರ ನಿರ್ಮಾಣಕ್ಕೆ ಒಂದು ಬಾರಿ ನನಗೆ ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಿದ್ಧೇಶ್ವರ ಶ್ರೀಗಳಿಗೆ ಗುರುವಂದನೆ ನಮನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಗಾಲಿ ಜನಾರ್ಧನ ರೆಡ್ಡಿ,ಅಭ್ಯರ್ಥಿ ಶ್ರೀಕಾಂತ ಬಂಡಿ ಅವರ ಪರಿಚಯದ ಸಾಕ್ಷಿ ಚಿತ್ರ ಬೃಹತ್ ಪರದೆಯ ಮೇಲೆ ಮೂಡಿ ಬಂದಿತು.

ಕಾರ್ಯಕ್ರಮದ ನಂತರ ಸರಿಗಮಪ ಕಲಾ ತಂಡದವರಿಂದ ಸಂಗೀತ ಕಾರ್ಯಕ್ರಮ ಜರುಗಿತು.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

10 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

26 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

50 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago