News Karnataka Kannada
Friday, May 10 2024
ವಿಜಯಪುರ

ವಿಜಯಪುರ: ಫೆಬ್ರವರಿಯಲ್ಲಿ ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಲೋಕಾರ್ಪಣೆ!

Shimoga and Vijayapura airports to be inaugurated in February
Photo Credit : By Author

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದ ವೇಳೆ ಫೆಬ್ರವರಿಯಲ್ಲಿ ಅವರು ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ವಿಜಯಪುರ ನಗರದ ಹೊರವಲಯದ ಬುರಾಣಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಶೇ 75ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಫೆಬ್ರವರಿಯಲ್ಲಿ ಲೋಕಾರ್ಪಣೆಗೆ ಸಿದ್ಧವಾಗುತ್ತಿದೆ. ಕಲಬುರಗಿಗೆ ನರೇಂದ್ರ ಮೋದಿ ಭೇಟಿ ನೀಡಿದಾಗ ಉದ್ಘಾಟನೆ ಬಗ್ಗೆ ಮಾಹಿತಿ ಸಹ ನೀಡಲಾಗಿದೆ.

ಈ ವಿಮಾನ ನಿಲ್ದಾಣ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಅವರ ಕನಸಾಗಿದೆ. ವಿಮಾನ ನಿಲ್ದಾಣವನ್ನು 2022ರ ಡಿಸೆಂಬರ್‌ನಲ್ಲಿ ಸಂಚಾರಕ್ಕೆ ಮುಕ್ತಗೊಳ್ಳುವ ಗುರಿ ಹೊಂದಲಾಗಿತ್ತು. ಆದರೆ ಕಾಮಗಾರಿ ವಿಳಂಬವಾಗಿದ್ದು, 2023ರಲ್ಲಿ ಲೋಹದ ಹಕ್ಕಿಗಳ ಹಾರಾಟ ಆರಂಭವಾಗಲಿದೆ.

ಮಂಗಳವಾರ ಗೋವಿಂದ ಕಾರಜೋಳ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಪರೀಶಿಲಿಸಿದರು. ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿರುವ ಅವರು, ‘ಅಂತಿಮ ಹಂತದಲ್ಲಿ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ. ವಿಮಾನ ನಿಲ್ದಾಣವನ್ನು Airbus-320 ವಿಮಾನಗಳ ಹಾರಾಟಕ್ಕೆ ಅಗತ್ಯವಿರುವಂತೆ ರೂಪಿಸಲಾಗಿದೆ. ಒಟ್ಟು 347.92 ಕೋಟಿ ರೂ. ಮಂಜೂರಾಗಿದ್ದು, ಎರಡು ಹಂತದಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು