News Karnataka Kannada
Thursday, May 16 2024
ವಿಜಯಪುರ

ಸಿಎಂ ಜತೆ ವೇದಿಕೆ ಹಂಚಿಕೊಂಡಿದ್ದ ತನ್ವೀರ್ ವಿರುದ್ಧ ಅಮಿತ್‌ ಶಾಗೆ ಪತ್ರ ಬರೆದ ಯತ್ನಾಳ್‌

ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಅವರ ಜೊತೆ ವೇದಿಕೆ ಹಂಚಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ವೀರ್ ಪೀರ್‌ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಕೇಂದ್ರ ತಂಡಗಳ ಮುಖಾಂತರ ತನಿಖೆ ನಡೆಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Photo Credit : News Kannada

ವಿಜಯಪುರ: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್​​ ತನ್ವೀರ್​ ಪೀರಾ ಹಾಸ್ಮೀ ಅವರ ಜೊತೆ ವೇದಿಕೆ ಹಂಚಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ವೀರ್ ಪೀರ್‌ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಕೇಂದ್ರ ತಂಡಗಳ ಮುಖಾಂತರ ತನಿಖೆ ನಡೆಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಯೋತ್ಪಾದಕ ಸಂಘಟನೆ ಐಸಿಸ್‌ ಮೇಲೆ ಸಹಾನುಭೂತಿ ಹೊಂದಿರುವ ತನ್ವೀರ್ ಪೀರಾ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡ ಘಟನೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಪೀರಾ ಅವರು ಈ ಹಿಂದೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ ರ್ಯಾಡಿಕಲ್ ಇಸ್ಲಾಮಿಕ್ ಔಟ್‌ಫಿಟ್ ನಾಯಕರನ್ನು ಭೇಟಿಯಾಗಿದ್ದರು ಎಂಬುದು ನನ್ನ ಅರಿವಿಗೆ ಬಂದಿದೆ. ಇನ್ನೂ ಆತಂಕಕಾರಿ ಸಂಗತಿಯೆಂದರೇ ಪೀರಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದು ಇದೇ ಮೊದಲಲ್ಲ. ಅವರು ಹಿಂದೆ ಅನೇಕ ಬಾರಿ ಭೇಟಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು