News Karnataka Kannada
Monday, April 29 2024
ವಿಜಯಪುರ

ಕೋವಿಡ್‌ ವೇಳೆ ಯಡಿಯೂರಪ್ಪ 40 ಸಾವಿರ ಕೋಟಿ ರೂ. ಮಾಡಿದ್ದಾರೆ: ಬಾಂಬ್‌ ಸಿಡಿಸಿದ ಯತ್ನಾಳ್‌

ವಿಜಯಪುರದ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದೊಡ್ಡ ಭ್ರಷ್ಟಾಚಾರದ ಬಾಂಬ್‌ ಸಿಡಿಸಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ ಹೇಳಿದ್ದಾರೆ.
Photo Credit : News Kannada

ವಿಜಯಪುರ: ವಿಜಯಪುರದ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದೊಡ್ಡ ಭ್ರಷ್ಟಾಚಾರದ ಬಾಂಬ್‌ ಸಿಡಿಸಿದ್ದಾರೆ. ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ ಹೇಳಿದ್ದಾರೆ.

ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ದರು. ಇದಕ್ಕೆ 10 ಸಾವಿರ ಬೆಡ್​​ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್​​ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ.

ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು