News Karnataka Kannada
Tuesday, April 23 2024
Cricket
ಬೆಂಗಳೂರು

ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್​ ವಿಧಿವಶ

mla-cm-nimbannavar
Photo Credit : Twitter

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಬಿಜೆಪಿ ಶಾಸಕ ಸಿ.ಎಂ ನಿಂಬಣ್ಣನವರ್ (77) ಬನ್ನೇರುಘಟ್ಟದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕಲಘಟಗಿ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು, ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಬೆಳಗ್ಗೆ 11:10 ರ ಸಮಯಕ್ಕೆ ಹೃದಯಘಾತದಿಂದ ನಿಧನರಾಗಿದ್ದಾರೆ. ಪಾರ್ಥಿವ ಶರೀರವನ್ನು ಕಲಘಟಗಿಗೆ ಕೊಂಡೊಯ್ಯಲು ಸಿದ್ಧತೆ ನಡೆಸಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿತ್ತು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು