News Karnataka Kannada
Thursday, April 18 2024
Cricket
ಬೆಂಗಳೂರು

ಮಹಿಳೆಗೆ ಮದ್ಯಪಾನ ಮಾಡಿಸಿ ಅತ್ಯಾಚಾರ : ಆರೋಪಿ ಅರೆಸ್ಟ್

Untitled 181
Photo Credit :

ಬೆಂಗಳೂರು: ರಾಜಧಾನಿಯಲ್ಲಿ ಯುವತಿಯ ಮೇಲೆ ಆಯಸಿಡ್ ದಾಳಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಹೀನಕೃತ್ಯ ಬೆಳಕಿಗೆ ಬಂದಿದೆ.

ಮಹಿಳೆಯನ್ನು ಕರೆದೊಯ್ದು ಮದ್ಯಪಾನ ಮಾಡಿಸಿ ಬಳಿಕ ಆಕೆಯ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯನ್ನು ಇಲ್ಲಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮದ್ಯಪಾನ ಮಾಡಿಸಿದ್ದಾನೆ. ನಂತರ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಮುಕನ ಅಟ್ಟಹಾಸಕ್ಕೆ ಬಳಲಿದ ಮಹಿಳೆಯ ಕೂಗಾಟ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರೋಪಿ ನರಸಿಂಹರಾಜುನನ್ನು ಬಂಧಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು