News Karnataka Kannada
Friday, April 19 2024
Cricket
ಬೆಂಗಳೂರು

ಮೇ10ರೊಳಗೆ ಸಚಿವ ಸಂಪುಟ ರಚನೆ : ಯಡಿಯೂರಪ್ಪ

Untitled 7
Photo Credit :

ಬೆಂಗಳೂರು: ಸಿಎಂ ಬದಲಾವಣೆ ಕೇವಲ ಊಹಾಪೋಹ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ ಕೂಡ ಇದನ್ನೇ ಸ್ಪಷ್ಟಪಡಿಸಿ ಹೋಗಿದ್ದಾರೆ.

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾತಿಲ್ಲ. 2023 ರಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದರು. ಇದೇ ವೇಳೆ ಸಂಪುಟ ಪುನರ್ ರಚನೆ ವಿಚಾರವಾಗಿ ಮಾತನಾಡಿ, ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ಸಂಪುಟ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ. ಮೇ 10 ರೊಳಗೆ ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎಂದು ಬಿ.ಎಸ್.ವೈ. ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು