ಅಂತರ್ಜಾತಿ ವಿವಾಹ ಪ್ರೋತ್ಸಾಹಕ್ಕೆ ಸ್ನೇಹ ಸಮ್ಮೇಳನ

ಬೆಂಗಳೂರು: ಸಮಾಜದಲ್ಲಿ ಮೇಲು , ಕೀಳು , ತಾರತಮ್ಯಗಳನ್ನು ನಿವಾರಣೆ ಮಾಡಿ , ಸಾಮರಸ್ಯ ಮೂಡಿಸುವ ಹಾಗೂ ಹಿಂದೂಗಳಲ್ಲಿ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ನಿಕೇರಿಯ ವಿಶ್ವ ಹಿಂದೂ ಅಂತರ್ಜಾತಿ ವಿವಾಹ ಪ್ರೋತ್ಸಾಹಕ ಸಂಘದ ಸಂಸ್ಥಾಪಕ ಅಧ್ಯಕ್ಷರು ಮನ್ನಿಕೇರಿಯ ಮಹಾಂತಲಿಂಗೇಶ್ವರ ಮಠದ ಪೂಜ್ಯ ಶ್ರೀ ವಿಜಯ ಸಿದ್ಧೇಶ್ವರ ಸ್ವಾಮೀಜಿ ಹೇಳಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಲು ರಾಜ್ಯದಾದ್ಯಂತ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು .  ಅಂತರ್ಜಾತಿ  ವಿವಾಹವಾದ ದಂಪತಿಗಳನ್ನು ಗೌರವಿಸುವ ಅವರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸ್ನೇಹ ಸಮ್ಮೇಳನ ಹಾಗೂ ಇನ್ನಿತರ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗುವುದು. ಒಟ್ಟಾರೆ ಜಾತಿ ವ್ಯವಸ್ಥೆ ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಎಲ್ಲ ಜನರಿಗೂ ಧಾರ್ಮಿಕ ಹಾಗೂ ಸಾಮಾಜಿಕ ಸಮಾನತೆಯ ಅವಕಾಶಗಳನ್ನು ದೊರಕಿಸುವ , ಸಮಾನತೆ ಸಾರುವ ವಿಚಾರ ಧಾರೆಗಳನ್ನು ಉತ್ತೇಜಿಸುವಂತಹ ಉದಾತ್ತ ಧೈಯ ಹೊಂದಿದ್ದು ಈ ಮೂಲಕ ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರವಾಗುವುದನ್ನು ತಪ್ಪಿಸುವುದು ನಮ್ಮ ಪರಮ ಗುರಿಯಾಗಿದೆ. ಈಗಾಗಲೇ ಮತಾಂತರಗೊಂಡವರನ್ನು ಮನವೊಲಿಸಿ ಮತ್ತೆ ಹಿಂದೂ ಧರ್ಮಕ್ಕೆ ಮರಳಿ ಕರೆತರುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಲಕ್ಷಾಂತರ ಜನ ಅಂತರ್ಜಾತಿ ವಿವಾಹವಾಗಿದ್ದು ಅವರೆಲ್ಲರನ್ನು ಒಂದೇ ವೇದಿಕೆಗೆ ತರುವ ಜೊತೆಗೆ ಅಂತರ್ಜಾತಿ ವಿವಾಹವಾದ ಹಿಂದೂಗಳು ಹಾಗೂ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡ ಆರ್ಥಿಕವಾಗಿ ಹಿಂದೂಳಿದ ಬಡಕುಂಟುಂಬಗಳಿಗೆ ನೆರವು , ಶೈಕ್ಷಣಿಕ , ಸಾಮಾಜಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾದ ಗಮನಕ್ಕೆ ತರುವುದು , ಎಂದು ವಿಜಯ  ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

Ashika S

Recent Posts

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ…

38 mins ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ…

55 mins ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

1 hour ago

ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು,…

2 hours ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

2 hours ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

2 hours ago