ಬೆಂಗಳೂರು: ಬಟ್ಟೆ ಹಾಗೂ ಶೂ ಮಳಿಗೆಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಚಿಕ್ಕಜಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ರಾತ್ರಿ ಸುಮಾರು 10ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಶಾರ್ಟ್ ಸೆರ್ಕ್ಯೂಟ್ನಿಂದ ಬೆಂಕಿಹೊತ್ತಿಕೊಂಡಿರುವ ಶಂಕೆ. ಅಗ್ನಿ ಶಾಮಕದಳ ಸಿಬ್ಬಂದಿ ಮಳಿಗೆಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.