ಬೆಂಗಳೂರು

ಅನಿಯಂತ್ರಿತವಾಗಿ ಏರುತ್ತಿರುವ ಬೆಲೆಗಳ ವಿರುದ್ದ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ: ಕೆಪಿಸಿಸಿ ಸಂಚಾಲಕ ತಿಬ್ಬೇಗೌಡ ಕರೆ

ಬೆಂಗಳೂರು : ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅನಿಯಂತ್ರಿತವಾಗಿ ಏರುತ್ತಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ಹಾಗೂ ಖಾದ್ಯ ತೈಲಗಳ ಬಗ್ಗೆ ಹಾಗೂ ಅದಕ್ಕೆ ಕಾರಣವಾಗಿರುವ ಕೇಂದ್ರ ಸರಕಾರದ ವಿರುದ್ದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಕರೆ ನೀಡಿದರು.

ಇಂದು ರಾಜರಾಜೇಶ್ವರಿ ನಗರದ ಬಾಲಕೃಷ್ಣ ರಂಗಮಂದಿರದಲ್ಲಿ ಸ್ವಾತಿ ಜ್ಯೋತಿ ಮಹಿಳಾ ಸಹಕಾರಿ ಸಂಘ ಹಾಗೂ ಯಶಸ್‌ ಚಾರಿಟೇಬಲ್‌ ಟ್ರಸ್ಟ್‌ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಬೃಹತ್‌ ಉಚಿತ ಕೋವಿಡ್‌ ಲಸಿಕೆಯನ್ನು ನೀಡುವ ಮಹಿಳೆಯರಿಗೆ ಸೀರೆ – ಬ್ಯಾಂಕ್ಯೇಟ್‌ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದಲ್ಲಿ ಕೇಂದ್ರ ಸರಕಾರದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಬಿಜೆಪಿ ಜನಸಾಮಾನ್ಯರ ಜೀವನವನ್ನು ದುಸ್ತರಕ್ಕೀಡುಮಾಡಿದೆ. ಅದರಲ್ಲೂ ಕರೋನಾ ಸಂಧರ್ಭದಲ್ಲಿ ಜನರಿಗೆ ಮುನ್ನೇಚ್ಚರಿಕೆ ನೀಡದೆ ಲಾಕ್‌ಡೌನ್‌ ಮಾಡಿ ಇನ್ನಷ್ಟು ತೊಂದರೆಗೀಡು ಮಾಡಿತು. ಲಾಕ್‌ಡೌನ್‌ ನ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಸಂಧರ್ಭದಲ್ಲೇ ಅಗತ್ಯವಸ್ತುಗಳ ಬೆಲೆಯನ್ನು ಏರಿಸುವ ಮೂಲಕ ಜನರ ಜೀವನದ ಮೇಲೆ ಗಧಾಪ್ರಹಾರ ಮಾಡಿದೆ. ಕಾಂಗ್ರೆಸ್‌ ಸರಕಾರ 70 ವರ್ಷಗಳಲ್ಲಿ ಸಾಧಿಸದೇ ಇರುವುದನ್ನು ಬಿಜೆಪಿ ಕೇವಲ 7 ವರ್ಷಗಳಲ್ಲಿ ಸಾಧಿಸಿದೆ ಎಂದು ವಂಗ್ಯವಾಡಿದರು. ಈ ಬಗ್ಗೆ ಜನರಲ್ಲಿ ಸಾಕಷ್ಟು ಅಸಮಾಧಾನವಿದೆ. ಇದರ ಬಗ್ಗೆ ಮತ್ತಷ್ಟು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಮ್ಮ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಶ್ರೀಮತಿ ಕುಸುಮಾ ಮಾತನಾಡಿ, ಕೋವಿಡ್‌ ಲಸಿಕೆಯನ್ನು ನೀಡುವ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಬಿಜೆಪಿ ಮುಖಂಡರುಗಳು. ಕೋವಿಡ್‌ ನಿಂದ ತೊಂದರೆಗೀಡಾದ ಜನರಿಗೆ ಬಿಜೆಪಿ ಸರಕಾರ ಯಾವುದೇ ಸಹಾಯವನ್ನು ಮಾಡಿಲ್ಲ. ಆದರೆ, ನಮ್ಮ ಪಕ್ಷ ಈ ಸಂಧರ್ಭದಲ್ಲಿ ಜನರಿಗೆ ಸಾಂತ್ವಾನ ಹೇಳುವ ಕಾರ್ಯದಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದೆ. ಇಂತಹ ಬದ್ದತೆ ನಮ್ಮ ಪಕ್ಷದಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್‌ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಇದೇ ಸಂಧರ್ಭದಲ್ಲಿ ತಿಬ್ಬೇಗೌಡ ಅವರಿಂದ ಸೀರೆ ಹಾಗೂ ಬ್ಯಾಂಕೇಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಜ್‌ಕುಮಾರ್‌, ಕಾಂಗ್ರೆಸ್‌ ಮುಖಂಡರಾದ ಪ್ರೀತಂ, ಶಿವು ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Raksha Deshpande

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

19 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

37 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

54 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago