ಅಪಘಾತದಿಂದ ಸಂಭವಿಸಿದ ಕಾಲು ನೋವಿನಿಂದ ಆಪರೇಷನ್​ಗೆ ಒಳಗಾಗಿರುವ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು : ಅಪಘಾತದಿಂದ ಸಂಭವಿಸಿದ ಕಾಲು ನೋವಿನಿಂದ ಆಪರೇಷನ್​ಗೆ ಒಳಗಾಗಿರುವ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ವಿಶ್ರಾಂತಿಗಾಗಿ ದಾಖಲಾಗಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ರೇಣುಕಾಚಾರ್ಯ, ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್​ಗೆ ಒಳಗಾಗಿದ್ದೇನೆ. ಆತ್ಮೀಯ ಮಿತ್ರ ಮತ್ತು ಶಾಸಕರಾದ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಮೊಣಕಾಲೀನ ಸರ್ಜರಿ ನೆಡೆಸಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆಯಿಂದ ಆದಷ್ಟು ಬೇಗ ಗುಣಮುಖನಾಗಿ ಜನಸೇವೆಗೆ ಮರುಳಲಿದ್ದೇನೆ.

ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದು ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗುತ್ತಿದ್ದು, ನಿಮ್ಮ ಅಹವಾಲುಗಳಿಗೆ ದೂರವಾಣಿ ಮೂಲಕ ನನ್ನ ಆಪ್ತ ಸಹಾಯಕರು ಸ್ಪಂದಿಸಲಿದ್ದು, ಸಹಕರಿಸಬೇಕಾಗಿ ವಿನಯಪೂರ್ವಕವಾಗಿ ವಿನಂತಿಸುತ್ತೇನೆ ಎಂದು ಎಂ.ಪಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

Gayathri SG

Recent Posts

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

8 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

21 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

1 hour ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

1 hour ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

2 hours ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

2 hours ago