News Karnataka Kannada
Saturday, May 04 2024
ಬೆಂಗಳೂರು

ಆಂತರಿಕ ಕಿತ್ತಾಟಕ್ಕೆ ಬೇಸತ್ತು ಬಿಜೆಪಿ ಮಾಜಿ ಶಾಸಕ ಬಸವರಾಜು ಎಎಪಿಗೆ ಸೇರ್ಪಡೆ

Aap Hdbasavaraj 10072021
Photo Credit :

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಜನಪರ ಆಡಳಿತವನ್ನು ಮೆಚ್ಚಿ, ಹಾಗೂ ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ, ಆಂತರಿಕ ಕಿತ್ತಾಟದಿಂದ ಬೇಸತ್ತು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಎಚ್‌.ಡಿ.ಬಸವರಾಜು ಎಎಪಿಯನ್ನು ಸೇರಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯು ಆರಂಭದ ದಿನದಿಂದಲೂ ಪ್ರಾಮಾಣಿಕತೆ ಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಅನೇಕರು ಎಎಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ.

ಎಚ್‌.ಡಿ.ಬಸವರಾಜುರವರು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆಯ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ ಅನುಭವ ಹೊಂದಿದ್ದಾರೆ. 2005ರಿಂದ 2007ರವರೆಗೆ ಕರ್ನಾಟಕ ಸರ್ಕಾರ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ, 2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಜಯದೇವ ಇನ್ಸ್‌ಟಿಟ್ಯೂಟ್‌ ಆಫ್‌ ಕಾರ್ಡಿಯೋವಸ್ಕುಲಾರ್‌ ಸೈನ್ಸಸ್‌ ಅ್ಯಂಡ್‌ ರಿಸರ್ಚ್‌ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ ಹಾಗೂ ಚಿಕ್ಕಮಗಳೂರು – ಕೊಡಗು ಗ್ರಾಮೀಣ ಬ್ಯಾಂಕಿನ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್.ಡಿ.ಬಸವರಾಜುರವರು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು