ಆರ್‌ಟಿಒ ಅಧಿಕಾರಿಗಳ ಕಾರ್ಯಾಚರಣೆ: ಸಮರ್ಪಕ ದಾಖಲೆಯಿಲ್ಲದ ಐಷಾರಾಮಿ 15 ಕಾರು ವಶ

ಬೆಂಗಳೂರು: ಇಲ್ಲಿನ ಸಾರಿಗೆ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿ, ಸಮರ್ಪಕ ದಾಖಳೆ ಇಲ್ಲದ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಟ ಅಮಿತಾಬ್ ಬಚ್ಚನ್ ಅವರ ಹೆಸರಿನಲ್ಲಿರುವ ರೋಲ್ಸ್ ರಾಯ್ ಕಾರು, ವಿಧಾನ ಪರಿಷತ್ ಸದಸ್ಯ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನು ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ವಿಮೆ ಇಲ್ಲದ, ಸೂಕ್ತ ದಾಖಲೆ ಇಲ್ಲದ, ಬೇರೆ ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿ, ಒಂದೇ ನಂಬರ್‌ನಲ್ಲಿ ಬೇರೆ ಬೇರೆ ಕಾರುಗಳು ಓಡಾಟ ಮಾಡುತ್ತಿರುವುದನ್ನು ಕಾರ್ಯಾಚರಣೆ ವೇಳೆ ಆರ್‌ಟಿಒ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು 15 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

Sampriya YK

Recent Posts

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

2 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

15 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

38 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

43 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

55 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

58 mins ago