News Karnataka Kannada
Monday, April 29 2024
ಬೆಂಗಳೂರು

ಆಹಾರದಲ್ಲಿ ಸ್ವಾವಲಂಬಿ ರಾಷ್ಟ್ರವಾಗುವುದು ಗುರಿ: ಶೋಭ ಕರಂದ್ಲಾಜೆ

New Project 2021 09 22t211118.635
Photo Credit :

ಬೆಂಗಳೂರು: ಭಾರತ 130 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದರೂ ಸಹ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ರಾಷ್ಟ್ರವಾಗಿದ್ದು, ಭಾರತದ ಪ್ರಮಖ ಹಾಗೂ ಅತಿ ಹೆಚ್ಚು ಜನರು ತೊಡಗಿಸಿಕೊಂಡಿರುವ ಕೃಷಿಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.

ನಗರದ ಅಶೋಕ ಹೋಟೆಲ್‍ನಲ್ಲಿ ಎಪೆಡಾ ಸಂಸ್ಥೆಯ ಸಹ ಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಫ್ತುದಾರರ ಸಮಾವಶ ಹಾಗೂ ವಸ್ತುಪ್ರದರ್ಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿರುವ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಒಂದಾಗಿರುವ ರಾಷ್ಟ್ರ ಭಾರತವಾಗಿದ್ದು, ಇಲ್ಲಿನ ರೈತರು ಬೆಳೆದ ಬೆಳೆಗಳಿಗೆ ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ಒದಗಿಸುವ ಉದ್ದೇಶದಿಂದ ಕೃಷಿ ಬೆಳೆಗಳ ಗುಣಮಟ್ಟ ಹೆಚ್ಚಿಸುವುದು ಹಾಗೂ ಸಂಸ್ಕರಣೆಯ ತಾಂತ್ರಿಕತೆಯನ್ನು ಸರಳೀಕರಣಗೊಳಿಸುವುದರ ಜೊತೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಸ್ಥಳೀಯ ಬೆಳೆಗಳಿಗೆ ಅನುಗುಣವಾಗಿ ಕೃಷಿ ಕೈಗಾರಿಕೆಗಳನ್ನು ಸ್ಥಾಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯ ಅವಶ್ಯಕತೆಗನುಗುಣವಾಗಿ ಉತ್ತಮ ಗುಣಮಟ್ಟ, ರಸಾಯನಿಕ ಮುಕ್ತ ಹಾಗೂ ಸಂಸ್ಕರಣಾ ಘಟಕಗಳ ಕಡೆ ನಾವು ಗಮನಹರಿಸಿದಲ್ಲಿ ನಮ್ಮ ರೈತರಿಗೆ ಉತ್ತಮ ಬೆಲೆ ದೊರಕುತ್ತದೆ ಹಾಗೂ ಇದರಿಂದ ಅವರ ಆದಾಯ ಸಹ ದ್ವೀಗುಣಗೊಳ್ಳುತ್ತದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಉಪಯೋಗವನ್ನು ರಫ್ತುದಾರರು, ರೈತರು ಮತ್ತು ಕೈಗಾರಿಕೋದ್ಯಮಿಗಳು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾನಿಲಯಗಳು ಸ್ಥಳೀಯ ರೈತರೊಂದಿಗೆ ಕೈಜೋಡಿಸುವ ಮೂಲಕ ಬೇಗ ಇಳುವರಿ ಕೊಡುವ ಹಾಗೂ ಉತ್ತಮ ಗುಣಮಟ್ಟದ ಬೆಳಗಳನ್ನು ಬೆಳೆಯಲು ಸಹಾಯಕವಾಗುವಂತೆ ಸಂಶೋಧನೆಯಲ್ಲಿ ತೊಡಗಿಕೊಳ್ಳಬೇಕು. ಇದಕ್ಕಾಗಿ ಅವಶ್ಯವಿರುವ ಅಂಶಗಳನ್ನು ನೀಡಿ ಸಹಕರಿಸಲು ಸರ್ಕಾರ ಸನ್ನದ್ದವಾಗಿದೆ ಎಂದು ತಿಳಿಸಿದರು.

ವಿಶ್ವಸಂಸ್ಥೆ 2023ನೇ ಸಾಲನ್ನು ಮಿಲ್ಲೆಟ್ಸ್ ವರ್ಷ ಎಂದು ಆಚರಿಸುತ್ತಿದೆ, ಇದಕ್ಕಾಗಿ ಭಾರತ ಸರ್ಕಾರ ಬೇಡಿಕೆಯನ್ನು ಸಲ್ಲಿಸಿತ್ತು, ಜಗತ್ತಿನಲ್ಲಿ ಅತೀ ಹೆಚ್ಚು ಮಿಲ್ಲೆಟ್ಸ್ ಬೆಳೆಯುವ ದೇಶ ನಮ್ಮದು. ನಾವು ಬೆಳೆದ ಬೆಳೆಗಳಿಗೆ ನಾವೇ ಮಾರುಕಟ್ಟೆಯನ್ನು ಹುಡುಕುವ ಬದಲಾಗಿ ವಿಶ್ವ ಮಾರುಕಟ್ಟೆ ನಮ್ಮ ಬೆಳೆಗಳನ್ನು ಬಯಸಿ ನಮ್ಮಲ್ಲಿಗೆ ಬರುವಂತೆ ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯುವ ವಾತಾವರಣವನ್ನು ಸೃಷ್ಠಿಸೋಣ. ರಾಜ್ಯದ ಕೈಗಾರಿಕೆ ಇಲಾಖೆಯಲ್ಲಿರುವ ಕೃಷಿ ರಫ್ತು ವಿಭಾಗವನ್ನು ಪ್ರತ್ಯೇಕಗೊಳಿಸಿ ಕ್ಲಸ್ಟರ್ ರೂಪಿಸುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗಿದ್ದು, ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜಕುಮಾರ್ ಕತ್ರಿ, ಪ್ರಧಾನ ಕಾರ್ಯದರ್ಶಿಗಳಾದ ಡಾ.ರಾಜೇಂದ್ರಕುಮಾರ್ ಕಠಾರಿಯಾ,ನಬಾರ್ಡ್ ಬೆಂಗಳೂರು ಶಾಖೆಯ ಮುಖ್ಯಸ್ಥರಾದ ನೀರಜ್ ಕುಮಾರ್ ವರ್ಮ್, ಆಹಾರ ಸಂಸ್ಕರಣ ಸಂಸ್ಥೆಯ ನಿರ್ದೇಶಕರಾದ ಡಾ. ಆನಂದ ರಾಮಕೃಷ್ಣನ್, ರಫ್ತು ವಿಭಾಗದ ಜಂಟಿ ನಿರ್ದೇಶಕರಾದ ಹೆಚ್.ಡಿ.ಲೋಕೇಶ ಸೇರಿದಂತೆ ರೈತರು ಹಾಗೂ ಉದ್ಯಮಿಗಳು ಭಾಗವಹಿಸಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು