News Karnataka Kannada
Wednesday, May 15 2024
ಬೆಂಗಳೂರು

ಇಂದಿನಿಂದ ಆನ್‌ಲೈನ್ ಗೇಮ್ ಬ್ಯಾನ್!

Game
Photo Credit :

ಬೆಂಗಳೂರು: ರಾಜ್ಯದ ಉಭಯ ಸದನಗಳಲ್ಲಿ ಆನ್‌ಲೈನ್ ಗೇಮ್ ಮಿಷೇಧಿಸುವಂತೆ ಈಗಾಗಲೇ ಪ್ರತಿಪಕ್ಷದ ನಾಯಕರು, ಸದಸ್ಯರು ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗೇಮ್‌‌ಗಳನ್ನು ನಿಷೇಧಿಸಲಾಗಿದೆ. ಇಂದಿನಿಂದ ಡ್ರೀಮ್ 11 ಹಾಗೂ ಫಸ್ಟ್ ಗೇಮ್, ಗೇಮ್​ಜಿ ಎಂಬ ಪ್ರಸಿದ್ಧ ಆನ್‌ಲೈನ್‌ ಜೂಜಾಟದ ಆಪ್‌ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ ಆಪ್ ಗಳನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಈ ಕುರಿತು ಹೈಕೋರ್ಟ್‌ಗೆ ರಿಟ್‌ ಅರ್ಜಿಯೂ ಸಲ್ಲಿಕೆಯಾಗಿದ್ದು, ಆನ್‌ಲೈನ್‌ ಬೆಟ್ಟಿಂಗ್‌ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್‌ ಹಲವು ಬಾರಿ ತಾಕೀತು ಮಾಡಿತ್ತು.

ಆನ್‌ಲೈನ್‌ ಮೂಲಕ ಗೇಮ್‌ ಆಡುವುದು, ಬೆಟ್ಟಿಂಗ್‌, ಟೋಕನ್‌ ಮೂಲಕ ಹಣದ ಆಟ ಆಡುವುದು, ಎಲೆಕ್ಟ್ರಾನಿಕ್‌ ಮನಿ, ಯಾವುದೇ ಆಟಕ್ಕೆ ಆನ್‌ಲೈನ್‌ ಮೂಲಕ ಹಣದ ವರ್ಗಾವಣೆ ಮಾಡುವುದಕ್ಕೆ ಇನ್ನು ಮುಂದೆ ನಿಷೇಧವಿರಲಿದ್ದು, ಅಪರಾಧ ಎಂದು ಪರಿಗಣಿಸಲಾಗುತ್ತದೆ.

ಕರ್ನಾಟಕ ಪೊಲಿಸ್‌ ಕಾಯ್ದೆ ಸೆಕ್ಸನ್‌ 2ಕ್ಕೆ ತಿದ್ದುಪಡಿ ತರಲಾಗಿದ್ದು ಸೆಕ್ಸನ್‌ 78ಎ/3 ಪ್ರಕಾರ, ಈಗಿರುವ ಒಂದು ತಿಂಗಳ ಜೈಲು ಶಿಕ್ಷೆ ಪ್ರಮಾಣವನ್ನು 6 ತಿಂಗಳುಗಳಿಗೆ ವಿಸ್ತರಿಸಲಾಗಿದ್ದು, , ಒಂದು ವರ್ಷದ ಶಿಕ್ಷೆ ಪ್ರಮಾಣವನ್ನು 3 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈಗಿರುವ 500 ರೂ. ದಂಡ 10 ಸಾವಿರ ರೂ.ಗೆ ಹೆಚ್ಚಳ, ಈಗಿರುವ 1,000 ರೂ. ದಂಡವನ್ನು 1 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು