News Karnataka Kannada
Thursday, May 02 2024
ಬೆಂಗಳೂರು

ಇಂದು-ನಾಳೆ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

New Project 2021 09 18t133204.684
Photo Credit :

ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಣಿಯು ಸೆ.18 ಮತ್ತು 19ರಂದು ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದು, ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಡೀ ನಗರ ಕೇಸರಿಮಯವಾಗಿದೆ.

ಈಗಾಗಲೇ ನಗರವನ್ನು ಬಾವುಟ, ಬ್ಯಾನರ್‌, ಫ್ಲೆಕ್ಸ್‌, ವಿದ್ಯುತ್‌ದೀಪಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಕಳೆ ಬಂದಿದೆ. ನಗರದ ಸುತ್ತಮುತ್ತ ರಸ್ತೆಗಳಲ್ಲಿ   ಅಲಂಕಾರ ಮಾಡಲಾಗಿದ್ದು  35 ತಂಡಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸಿದ್ದಾರೆ.

ಈಗಾಗಲೇ ಬಹುತೇಕ ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಗಮಿಸಿದ್ದು, ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಹಲವು ರೀತಿಯ ತೀರ್ಮಾನಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದ ಕಾರ್ಯ ತಂತ್ರಗಳು ಇಲ್ಲಿ ರೂಪಿತವಾಗಲಿವೆ.  ಸೆ.18ರಂದು ಸಂಜೆ ಅಪೂರ್ವ ರೆಸಾರ್ಟ್‌ನಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸೆ.19ರಂದು ತ್ರಿಶೂಲ್‌ ಕಲಾ ಭವನದಲ್ಲಿ ದಿನಪೂರ್ತಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಲಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ರಾಜ್ಯ ಪ್ರಭಾರಿ ಅರುಣ್‌ ಸಿಂಗ್‌, ಸಹಪರಭಾರಿ ಡಿ.ಕೆ. ಅರುಣ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ, ಕೇಂದ್ರದ ಸಚಿವರಾದ ಪ್ರಹ್ಲಾದ್‌ ಜೋಶಿ, ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಭಗವಂತ ಖೂಬಾ, ರಾಜ್ಯದ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ.

ಕಾರ್ಯಕಾರಿಣಿ ಸಭೆಯಲ್ಲಿ ಸುಮಾರು 574 ಮಂದಿ ಮಾತ್ರ ಭಾಗವಹಿಸಲಿದ್ದು, ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕಾರ್ಯ ಬಗ್ಗೆ, ಪಕ್ಷವನ್ನು ಮುಂದೆ ಸಂಘಟಿಸಬೇಕಾದ ರೀತಿ ಬಗ್ಗೆ, ಮುಖ್ಯಮಂತ್ರಿಗೆ ಹೇಗೆ ಬೆಂಬಲ ನೀಡಬಹುದು ಎಂಬುದರ ಬಗ್ಗೆ, ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಕಾರ್ಯಕರ್ತರು ಹೊತ್ತುಕೊಳ್ಳಬೇಕಾದ ಜವಾಬ್ದಾರಿ ಬಗ್ಗೆ, ಪಕ್ಷದ ತತ್ವ ಸಿದ್ಧಾಂತದ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚೆ ಯಾಗುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು