ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕರವಾಗಲಿದೆ.
ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನಿರ್ಣಯ ಆಗಲಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.
ಫಲಿತಾಂಶವನ್ನು https://karresults.nic.in/ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.