ಬೆಂಗಳೂರು: ಕಳೆದ 24 ಗಂಟೆಗಯಲ್ಲಿ ರಾಜ್ಯದಲ್ಲಿ 1001 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 28,94557ಕ್ಕೆ ಏರಿಕೆಯಾಗಿದೆ.
ಇಂದು 1465 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2834741ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 23419 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನಿಂದ ಇಂದು 22 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 36374ಕ್ಕೆ ಏರಿಕೆಯಾಗಿದೆ. ಸೋಂಕಿನ ಶೇಕಡಾರು ಪ್ರಮಾಣ ಶೇ. 0.68, ಮರಣ ಪ್ರಮಾಣ ಶೇ.2.19ರಷ್ಟಿದೆ. ಬೆಂಗಳೂರಿನಲ್ಲಿ 165 ಪ್ರಕರಣಗಳು ಪತ್ತೆಯಾಗಿದ್ದು, 293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.