ಇಂದು ಶಾಲೆ ಪುನಾರಾರಂಭ: ಸಚಿವರಿಗೆ ಶಾಲೆಗೆ ಭೇಟಿ ಕೊಡುವಂತೆ ಸಿಎಂ ಸೂಚನೆ

ಬೆಂಗಳೂರು: ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಇಂದಿನಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗಿಗೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರಿಗೆ ಸೂಚನೆ ನೀಡಿದ್ದು “ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ” ಎಂಬ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ‌ ಎಂದು ತಿಳಿಸಿದ್ದಾರೆ.‌

ಸಚಿವರು ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು. ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.

ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Sampriya YK

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

9 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

37 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

43 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

55 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

1 hour ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

1 hour ago