ಬೆಂಗಳೂರು : ಇನ್ನು ಮುಂದೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ, ಶಾಲು, ಹಣ್ಣಿನ ಬುಟ್ಟಿ, ಹಾರ, ತುರಾಯಿ ಹಾಗೂ ನೆನಪಿನ ಕಾಣಿಕೆಗಳನ್ನು ಯಾವುದೇ ರೀತಿಯ ಕಾಣಿಕೆಯಾಗಿ ನೀಡಬಾರದು, ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಆದೇಶ ಸರ್ಕಾರದ ಎಲ್ಲಾ ಇಲಾಖೆಗಳಿಗೆ ಅನ್ವಯಿಸುತ್ತದೆ ಹಾಗೂ ಎಲ್ಲಾ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.