News Karnataka Kannada
Thursday, May 02 2024
ಬೆಂಗಳೂರು

ಇನ್ನೂ ಎರಡು ದಿನ ಮಳೆ ಸಾಧ್ಯತೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Heavy rains disrupt normal life in Hubballi
Photo Credit :

ಬೆಂಗಳೂರು:  ಇನ್ನೂ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 23ರ ನಂತರ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದ್ದು, ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಧಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನವೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು