ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಿಗೆ ನವೆಂಬರ್ 15 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಅದೇ ರೀತಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಇನ್ನು ಮೂರು ದಿನಗಳ ಕಾಲ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳಿಗೆ ನವೆಂಬರ್ 15 ರಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ನವೆಂಬರ್ 16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.ನವೆಂಬರ್ 16 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 16 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಲವು ಕಡೆ ಭಾರಿ ಮಳೆ ಕಾರಣ ಕೊಯ್ಲಿಗೆ ಬಂದಿದ್ದ ಬೆಳೆ ಹಾಳಾಗುತ್ತಿದ್ದು, ರೈತರಿಗೆ ತೊಂದರೆಯಾಗಿದೆ. ಕಾಫಿ, ಭತ್ತ, ಮೆಕ್ಕೆಜೋಳ ಮೊದಲಾದ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿದೆ.

Swathi MG

Recent Posts

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

24 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

41 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago