ಬೆಂಗಳೂರು : ಬಿಬಿಎಂಪಿಯ ಶೈಕ್ಷಣಿಕ ವಿಭಾಗ ಈ ವರ್ಷ ಶಾಲಾ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಮಾಡದಿರಲು ನಿರ್ಧರಿಸಿದೆ.
ಕಳೆದ ವರ್ಷ ಸ್ವೆಟರ್ ಗಳನ್ನು ಸ್ವೀಕರಿಸದೇ ಇರುವ ವಿದ್ಯಾರ್ಥಿಗಳಿಗೆ ಸ್ವೆಟರ್ ಗಳನ್ನು ಪೂರೈಸುವಂತೆ ಶೈಕ್ಷಣಿಕ ಸಂಸ್ಥೆಗಳ ಮ್ಯಾನೇಜ್ಮೆಂಟ್ ಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.
ಬಿಬಿಎಂಪಿಯಲ್ಲಿ ಆರ್ಥಿಕ ಅಕ್ರಮಗಳ ಆರೋಪ, ಬಿಬಿಎಂಪಿ ಸಿಬ್ಬಂದಿಗಳು, ಮಧ್ಯವರ್ತಿಗಳು, ಗುತ್ತಿಗೆದಾರರು ಸ್ವೆಟರ್ ಪೂರೈಕೆ ವಿಷಯದಲ್ಲಿ ವಂಚನೆ ಎಸಗಿರುವ ಆರೋಪ ಕೇಳಿಬಂದಿರುವ ನಡುವೆಯೇ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದೆ.