ಬೆಂಗಳೂರು : ರಾಜ್ಯದ ಹಾನಗಲ್ ಮತ್ತು ಸಿಂದಗಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇನ್ನು ಸ್ವಲ್ಪ ದಿನದಲ್ಲೇ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಶೀಘ್ರದಲ್ಲಿಯೇ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಉಪ ಚುನಾವಣೆಯನ್ನು ನಾನು ಎನ್ನುವುದಕ್ಕಿಂತ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಬಲಿಷ್ಠವಾದ ಕಾರ್ಯಕರ್ತರ ಪಡೆ, ಬೂತ್ ಮಟ್ಟದಲ್ಲಿಯೂ ಪಕ್ಷದ ಸಂಘಟನೆ ಪ್ರಬಲವಾಗಿರುವುದರಿಂದ ಸಿಂದಗಿ ಮತ್ತು ಹಾನಗಲ್ನಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಬಸವರಾಜ ಹೇಳಿದ್ದಾರೆ.