ಎಲ್ಲ ಮುಖಂಡರು ಒಟ್ಟಾಗಿ ಪಕ್ಷವನ್ನು ಕಟ್ಟಲು ಶ್ರಮಿಸಬೇಕು : ಎಚ್.ಡಿ.ಕುಮಾರಸ್ವಾಮಿ ಖಡಕ್ ಸೂಚನೆ

ಬೆಂಗಳೂರು : ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ರಾಜಿ ಇಲ್ಲ. ಎಲ್ಲ ಮುಖಂಡರು ಒಟ್ಟಾಗಿ ಪಕ್ಷವನ್ನು ಕಟ್ಟಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದರು.

ಜನತಾಪರ್ವ 1.0 ಎರಡನೇ ಹಂತ ‘ಜನತಾ ಸಂಗಮ’ದ ಐದನೇ ದಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಹಾಗೂ ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಜತೆ ಸಮಾಲೋಚನೆ ನಡೆಸಿದ ಅವರು, ಪಕ್ಷದ ಸಂಘಟನೆ ಬಗ್ಗೆ ಯಾರೂ ಮೈಮರೆಯಬಾರದು. ಪಕ್ಷವನ್ನು ಉಪೇಕ್ಷೆ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ 2023ರ ವಿಧಾನಸಭೆ ಚುನಾವಣೆ ಗುರಿ ಇಟ್ಟುಕೊಂಡು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಯಾಗಿ ಕಟ್ಟಬೇಕು. ತಳಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸಬೇಕು. ಅದಕ್ಕಾಗಿ ಪ್ರತಿಯೊಬ್ಬರೂ ನಿಷ್ಠೆಯಿಂದ ದುಡಿಯಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದರು.

ಮುಖಂಡರಿಗೆ ಒಗ್ಗಟ್ಟಿನ ಮಂತ್ರ ಬೋಧಿಸಿದ ಕುಮಾರಸ್ವಾಮಿ, ಪಕ್ಷದ ಕೆಲಸ ಮಾಡುವಾಗ ಎಲ್ಲರೂ ಒಂದೇ ಗುರಿಯೊಂದಿಗೆ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಅವಕಾಶ ಇರಬಾರದು. ಸುಖಾಸುಮ್ಮನೆ ಇತರರಿಗೆ ಆಹಾರ ಆಗಬಾರದು ಎಂದು ಅವರು ಕಿವಿಮಾತು ಹೇಳಿದರು.

ಬೆಳಗ್ಗೆಯೇ ಮಂಡ್ಯ ಜಿಲ್ಲೆಯ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಯಾವುದೇ ಕಾರಣಕ್ಕೂ ನಮ್ಮ ನೆಲೆ ಕಳೆದುಕೊಳ್ಳಬಾರದು. ಅದಕ್ಕೆ ಅಗತ್ಯವಾದ ರೀತಿಯಲ್ಲಿ ಸಂಘಟನೆಯನ್ನು ಗಟ್ಟಿ ಮಾಡಬೇಕು. ಪಕ್ಷದ ವಿರುದ್ಧ ನಡೆಯುತ್ತಿರುವ ಪಿತೂರಿಗಳನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಬೇಕು ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ನಾನು ಕೂಡ ನಿರಂತರವಾಗಿ ಪ್ರವಾಸ ಮಾಡುತ್ತೇನೆ. ಹಳ್ಳಿಗಳಿಗೂ ಭೇಟಿ ನೀಡುತ್ತೇನೆ. ಜನರ ಸಮಸ್ಯೆಗಳಿಗೆ ಎಲ್ಲರೂ ಸ್ಪಂದಿಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಯತ್ನ ಮಾಡಬೇಕು. ಜನರ ಪರ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಸಲಹೆ ಮಾಡಿದರು.

ಇದಾದ ಮೇಲೆ ಮೈಸೂರು, ಚಾಮರಾಜನಗರ ಜಿಲ್ಲೆಗಳ ಮುಖಂಡರ ಜತೆಗಿನ ಚರ್ಚೆಯಲ್ಲಿಯೂ ಇದೇ ಮಾತುಗಳನ್ನು ಪುನರುಚ್ಚರಿಸಿದರಲ್ಲದೇ, ನಮ್ಮ ಪಕ್ಷದ ಸರಕಾರಗಳು ಕೊಟ್ಟಿರುವ ಕೊಡುಗೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಅಲ್ಲದೆ, ಪಕ್ಷದ ಭವಿಷ್ಯದ ಕಾರ್ಯಕ್ರಮಗಳಾದ ಪಂಚರತ್ನ ಮತ್ತಿತರೆ ಅಂಶಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು ಎಂದು ಮುಖಂಡರಿಗೆ ಅವರು ಸೂಚಿಸಿದರು.

ಕಾರ್ಯಾಗಾರದಲ್ಲಿ ಮಾಜಿ ಸಚಿವ ಪುಟ್ಟರಾಜು, ಪಕ್ಷದ ಹಿರಿಯ ಮುಖಂಡ ಎಲ್.ಆರ್.ಶಿವರಾಮೇಗೌಡ, ಶಾಸಕರಾದ ಸುರೇಶ್ ಗೌಡ, ಅನ್ನದಾನಿ, ಅಪ್ಪಾಜಿ ಗೌಡ, ಅಶ್ವಿನ್, ಮಹಾದೇವ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್, ಮೈಸೂರು ಜಿಲ್ಲಾಧ್ಯಕ್ಷ ನರಸಿಂಹ ಸ್ವಾಮಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಮಂಜುನಾಥ್, ಮೈಸೂರು ನಗರ ಅಧ್ಯಕ್ಷೆ ಪ್ರೇಮಾ ಮುಂತಾದವರು ಹಾಜರಿದ್ದರು.

Gayathri SG

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

5 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

22 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

46 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago