ಎಸ್ಸೆಸ್ಸೆಲ್ಸಿ: ರಾಜ್ಯದಲ್ಲಿ ಈ ಬಾರಿ ಬಹು ಆಯ್ಕೆ ಪ್ರಶ್ನೆ ಇಲ್ಲ

ಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.ಶಿಕ್ಷಕರು ಮತ್ತು ತಜ್ಞರ ಅಭಿಪ್ರಾಯಗಳನ್ನು ಪಡೆದು ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಕೋವಿಡ್‌-19 ಕಾರಣಕ್ಕೆ 2021ನೇ ಸಾಲಿನ ಪರೀಕ್ಷೆಯಲ್ಲಿ ಈ ವ್ಯವಸ್ಥೆ ಜಾರಿಗೊಳಿಸಲಾಗಿತ್ತು.

ವಿದ್ಯಾರ್ಥಿಗಳ ಹಿತಾಸಕ್ತಿಯಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವರವಾಗಿ ಉತ್ತರ ಬರೆಯುವ ಪದ್ಧತಿಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಪ್ರಥಮ ಭಾಷೆ ಹೊರತುಪಡಿಸಿ ಉಳಿದ ವಿಷಯಗಳಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. ಇದರಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಸಲಾಗುತ್ತದೆ. ಪ್ರಥಮ ಭಾಷೆಗೆ ಮಾತ್ರ 125 ಅಂಕಗಳನ್ನು ನಿಗದಿಪಡಿಸಲಾಗಿದೆ.

‘ಮಕ್ಕಳಲ್ಲಿ ಬರವಣಿಗೆ ಕೌಶಲ ಮತ್ತು ಜ್ಞಾನಮಟ್ಟ ಬೆಳೆಯುವುದು ಮುಖ್ಯ. ಬಹು ಆಯ್ಕೆ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಬರೆಯುವುದನ್ನು ಮರೆಯುತ್ತಾರೆ. ವಿದ್ಯಾರ್ಥಿಗಳು ವಿಷಯದ ವಿಶ್ಲೇಷಣೆ ನಡೆಸಿ ಬರೆಯುವುದು ಮುಖ್ಯವಾಗಬೇಕು’ ಎಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಕೆ. ಮಂಜುನಾಥ್‌ ಅಭಿಪ್ರಾಯಪಟ್ಟಿದ್ದಾರೆ.

Swathi MG

Recent Posts

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

2 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

20 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

21 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

25 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

35 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

41 mins ago