News Karnataka Kannada
Sunday, May 05 2024
ಬೆಂಗಳೂರು

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಸಚಿವರು

Sslc 18072021
Photo Credit :

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಇಂದು ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರೀಕ್ಷಾ ಕೇಂದ್ರದಲ್ಲಿ ಸಚಿವರೆ ಖುದ್ದು ಬೆಂಚ್ ಮೇಲೆ ಕುಳಿತು ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದಭ೯ದಲ್ಲಿ ಸಾವ೯ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾಥಿ೯ಗಳಿಗೆ ಗೋಚರವಾಗುವ ರೀತಿ ಪ್ರದಶ೯ನ ವಾಗಬೇಕು. ಈ ಬಾರಿ ಪರೀಕ್ಷೆ ಒ.ಎಮ್.ಆರ್ ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾಥಿ೯ ಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ಮಳೆ ಇರುವ ಹಿನ್ನೆಲೆಯಲ್ಲಿ ವಿದ್ಯಾಥಿ೯ ಗಳು ಪರೀಕ್ಷಾ ಕೇಂದ್ರ ಗಳಿಗೆ ಬೇಗ ಆಗಮಿಸಿದರೆ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು.
ಪರೀಕ್ಷೆ ಬರೆಯಲು ಡೆಸ್ಕ್ ಗಳು ಉತ್ತಮ ವಾಗಿರಬೇಕು ಈ ಬಗ್ಗೆ ಪರೀಕ್ಷಾ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ತಿಳಿಸಿದರು.

ಕಳೆದ ಬಾರಿ 6 ದಿನಗಳು 10 ನೇ ತರಗತಿ ಪರೀಕ್ಷೆ ಮಾಡಿದ ಅನುಭವವಿದೆ. ಈ ಬಾರಿ ಕೋವಿಡ್ ಕಾರಣದಿಂದ 2 ದಿನಗಳ ಕಾಲ ಪರೀಕ್ಷೆ ಮಾಡುತ್ತಿರುವುದರಿಂದ ಕಳೆದ ಬಾರಿಗಿಂತ ಉತ್ತಮವಾಗಿ ಈ ಬಾರಿ ಇಲಾಖೆಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಕೋವಿಡ್ ಪಾಸಿಟೀವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜ್ವರ ಕೆಮ್ಮು ನೆಗಡಿ ಅಂತಹ ಲಕ್ಷಣ ಕಂಡುಬಂದ ವಿದ್ಯಾಥಿ೯ ಗಳಿಗೆಪರೀಕ್ಷಾ ಕೇಂದ್ರಗಳಲ್ಲೇ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾಥಿ೯ ಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾಥಿ೯ ಗಳಿಗೆ ಸ್ಯಾನಿಟೈಜರ್, ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರ ಮೂಲಭೂತ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮುಂದಿನ ವರ್ಷದ ಶೈಕ್ಷಣಿಕ ಸಾಲು ಆರಂಭಿಸುವ ಬಗ್ಗೆ ಸಾವ೯ಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾಯ೯ಪಡೆ ರಚಿಸಲಾಗಿದ್ದು , ಕಾಯ೯ಪಡೆಯಲ್ಲಿ ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾಯ೯ ನಿವ೯ಹಸುತ್ತಿರುವ ಸಂಘ ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಸಭೆ ನಡೆಸಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ನೀಡಿರುವ ಎಸ್.ಒ.ಪಿಯನ್ನು ಪಾಲಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ‌ಸರಳೀಕೃತ ಮಾಡಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.ಶಿಕ್ಷಣ ಇಲಾಖೆ ನಾಳೆ ಪರೀಕ್ಷೆ ನಡೆಸಲು ಪೂರ್ಣವಾಗಿ ಸಜ್ಜಾಗಿದೆ ಎಂದರು.

ಪರೀಕ್ಷಾ‌ ಪ್ರವೇಶ ಪತ್ರ ಸಿಗಲಿಲ್ಲ ಎಂದು ಬಂದಿರುವ ದೂರುಗಳನ್ನು ಬಿ.ಇ.ಒ ಹಂತದಲ್ಲೇ ಪರಿಹರಿಸಲಾಗಿದೆ ಬಂದಿರುವ ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು