ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರದಿಂದ ಮಾತನಾಡಿ ; ಸಿದ್ದರಾಮಯ್ಯಗೆ ಚಾಟಿ ಬೀಸಿದ ಬಿಜೆಪಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರದಿಂದ ಮಾತನಾಡಿ ಎಂದು ಕಿಡಿಕಾರಿದೆ.

ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಪ್ರಧಾನಿ ಹುದ್ದೆಯಲ್ಲಿರುವ ಮೋದಿಯವರಿಗೂ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲಿಯೇ ಉಳಿಯಬೇಕು ಎಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ಸಿದ್ದರಾಮಯ್ಯನವರೇ ನಿಮಗೆ ಗ್ರಾಮೀಣ ಸಂಸ್ಕೃತಿ ಅರಿವೇ ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಚಾಟಿ ಬೀಸಿದೆ.

ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ ‘ಬುರುಡೆ ರಾಮಯ್ಯ’ ಎಂದು ಗುಡುಗಿದೆ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದಾರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ‘ಹೆಬ್ಬಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ ಆತನ ಯೋಗ್ಯತೆ, ಅರ್ಹತೆ ಏನು? ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ? ಎಂದು ಪ್ರಶ್ನಿಸಿದೆ.

Gayathri SG

Recent Posts

ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…

15 mins ago

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…

19 mins ago

ಸುರಿಯುವ ಮಳೆಯಲ್ಲೇ ದೈವ ನರ್ತನ; ಗಮನ ಸೆಳೆದ ರವಿ ಪಡ್ಡಮ್ ಅವರ ಗಗ್ಗರಸೇವೆ

ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…

31 mins ago

ಹೆಸ್ಕಾಂ ಲೈನ್ ಮೆನ್ ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

34 mins ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

46 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

1 hour ago