ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ, ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
ಈ ಕುರಿತಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಕಾರ್ಮಿಕ ಕಲ್ಯಾಣ ಮಂಡಳಿಗೆ ಪತ್ರ ಬರೆದಿದ್ದು, ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅಂತಿಮ ದಿನಾಂಕವನ್ನು ಶ್ರಮಿಕ ವರ್ಗದ ಹಿತದೃಷ್ಠಿಯಿಂದ ಮೇ.31, 2022ರವರೆಗೆ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.