News Karnataka Kannada
Sunday, May 05 2024
ಬೆಂಗಳೂರು

ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರ

Flag
Photo Credit :

ರಾಜ್ಯದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

  • ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ, ಪ್ರಸಕ್ತ ವರ್ಷದ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸುವುದು.
  • ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಪ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತಿಗೆ ಒಳಪಟ್ಟು ಗರಿಷ್ಠ 500 ಜನರು ಸೇರಲು ಮಾತ್ರ ಅನುಮತಿಸಿದೆ.
  • ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
  • ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
  • ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್/ ಮಹಾನಗರ ಪಾಲಿಕೆ / ಸ್ಥಳೀಯ ಸಂಸ್ಥೆ/ವಿದ್ಯುತ್ ಇಲಾಖೆ / ಆರೋಗ್ಯ ಇಲಾಖೆ / ಅಗ್ನಿಶಾಮಕ ಇಲಾಖೆ / ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ 34 ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು.
  • ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ / ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  • ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜ್ಯೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸಬೇಕು.
  • ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು, ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಕೃತಿ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು