News Karnataka Kannada
Friday, May 03 2024
ಬೆಂಗಳೂರು

ಕರೋನಾ ನಿವಾರಣೆಗೆ ಗಣಪತಿಗೆ ವಿಶೇಷ ಪೂಜೆ

New Project 2021 09 11t202602.929
Photo Credit :

ಬೆಂಗಳೂರು : ಕರೋನಾ ಮಹಾಮಾರಿ ಆದಷ್ಟು ಬೇಗ ನಿವಾರಣೆ ಆಗಲಿ ಎಂದು ಪ್ರಾರ್ಥಿಸಿ ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರದ ಪೂಜೆಯನ್ನು ನೆರವೇರಿಸಲಾಯಿತು .

 20 ಅಡಿ ಎತ್ತರದ ಕಬ್ಬಿನ ಹಾಗೂ ತೆಂಗಿನ ಕಾಯಿ ಗಣಪತಿ ಹೀಗೆ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ನಿರ್ಮಿಸಲಾಗುತ್ತಿದ್ದ ಮೂರ್ತಿಗಳು ದೇಶ  ವಿದೇಶದ ಗಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದವು. ಆದರೆ, ಕರೋನಾ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಕಳೆದರೆಡು ವರ್ಷಗಳಿಂದ ಸರಳವಾಗಿ ಆಲಂಕಾರವನ್ನು ಮಾಡಲಾಗುತ್ತಿದೆ. ಈ ಬಾರಿ ಮುಸುಕಿನ ಜೋಳ, ಹೂವುಗಳು ಹಾಗೂ ಸೊಪ್ಪುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರ ಮಾಡಲಾಗಿದೆ. ಅಲ್ಲದೆ, ಕರೋನಾ ಮಹಾಮಾರಿ ಆದಷ್ಟು ಬೇಗ ನಿವಾರಣೆ ಆಗಲಿ ಎಂದು ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಅಲ್ಲದೆ, ಇದೇ ಸಂಧರ್ಭದಲ್ಲಿ ಉಚಿತ ಲಸಿಕೆಯನ್ನು ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗಿದ್ದು, ಒಂದು ತಿಂಗಳುಗಳ ಕಾಲ ದೇವಸ್ಥಾನದಲ್ಲಿ ಉಚಿತ ಲಸಿಕೆಯನ್ನು ನೀಡಲಾಗುವುದು ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು