ಬೆಂಗಳೂರು

ಕರ್ನಾಟಕ ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಬುಧವಾರ 1,365 ಕೋವಿಡ್‌ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,33,192ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 22 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,061ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 327 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,33,839ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,558 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,74,839ಕ್ಕೆ ಏರಿಕೆಯಾಗಿದೆ. ಇನ್ನು 21,266 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,79,016 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,365 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.76ಕ್ಕೆ ಇಳಿದಿದೆ.

Sampriya YK

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

23 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

46 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago