ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯು 10,000 ರೂ. ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿ 5,000 ರೂ. ಠೇವಣಿ ಇಡಬೇಕು. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ನವೆಂಬರ್ 23 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ವಿಧಾನ ಪರಿಷತ್ ಚುನಾವಣೆ ಡಿಸೆಂಬರ್ 10 ಕ್ಕೆ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ4 ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 10 ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 16 ರ ವೇಳೆಗೆ ಎಲ್ಲಾ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.