ಬೆಂಗಳೂರು: ಇಂಧನ ಬೆಲೆ ಹಾಗೂ ತತ್ಪರಿಣಾಮ ದಿನ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಸೋಮವಾರ ಸೈಕಲ್ ಜಾಥಾ ಹಮ್ಮಿಕೊಂಡಿದ್ದಾರೆ.
ಕಳೆದ ವಾರ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕರು, ಈ ಬಾರಿ ಸೈಕಲ್ ಮೂಲಕ ಬಂದು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಲಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ಬೆಳಿಗ್ಗೆ 10 ಗಂಟೆಗೆ ಸೈಕಲ್ ಜಾಥಾ ಆರಂಭವಾಗಲಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ ನೇತೃತ್ವದ ವಹಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಜಾಥಾದಲ್ಲಿ ಭಾಗವಹಿಸಲಿದ್ದಾರೆ.