ಕಾಂಗ್ರೆಸ್ ಆಡಳಿದಲ್ಲಿ ಕರೋನಾ ಬಂದಿದ್ದರೆ ಜನ ಬೀದಿಯಲ್ಲಿ ಸಾಯಬೇಕಿತ್ತು : ಸಿಎಂ

ಬೆಂಗಳೂರು: ಕಾಂಗ್ರೆಸ್‌ ಅವಧಿಯಲ್ಲಿ  ಕರೋನಾ ದಂತಹ ಕಾಯಿಲೆ ಬಂದಿದ್ದರೆ ಜನ ರಸ್ತೆಗಳಲ್ಲೇ ಸಾಯುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿರುವ ಕಾಂಗ್ರೆಸ್‌ ವಿರುದ್ಧ ಅವರು ಕಿಡಿಕಾರಿದರು . ಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಸದನದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ ಉಂಟಾಗಿ ಅಂತಿಮವಾಗಿ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ಮಾಡಿದರು.

ಇದಕ್ಕೂ ಮುನ್ನ ಬೆಲೆ ಏರಿಕೆ ಕುರಿತ ವಿಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, ಬೆಲೆ ಏರಿಕೆ ಎಂಬುದು ಪ್ರತಿ ಸರ್ಕಾರದಲ್ಲೂ ಇರುವ ಸಾಮಾನ್ಯ ಸಂಗತಿ. ಹಿಂದಿನ ಸರ್ಕಾರಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ನಮ್ಮ ಅವಧಿಯಲ್ಲಿ ಬೆಲೆ ಏರಿಕೆಯಾಗಿದೆ. ಎಲ್ಲಾ ಆರ್ಥಿಕ ಮೂಲಗಳು ಸ್ತಬ್ಧಗೊಂಡ ಕೊರೋನಾ ಅವಧಿಯಲ್ಲೂ ಕೇವಲ ಇಂಧನ ತೆರಿಗೆಯ ಮೂಲದಿಂದ ಇಡೀ ದೇಶದ ಜನರ ಅಗತ್ಯಗಳನ್ನು ನರೇಂದ್ರ ಮೋದಿ ಪೂರೈಸಿದ್ದಾರೆ. ಹೀಗಾಗಿ ನಮ್ಮ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿಲ್ಲ. ಬದಲಿಗೆ ದೇಶದ ಬೆಲೆ ಹೆಚ್ಚಾಗಿದೆ. ನರೇಂದ್ರ ಮೋದಿ ಹತ್ತಿರವೂ ನಿಮ್ಮ ಯಾವೊಬ್ಬ ನಾಯಕನೂ ಸುಳಿಯಲಾರ ಎಂದು ಸಮರ್ಥಿಸಿಕೊಂಡರು.

ವಿಶ್ವ ಆರೋಗ್ಯ ಸಂಸ್ಥೆಯೇ ಭಾರತದ ಕೊರೋನಾ ನಿರ್ವಹಣೆಯನ್ನು ಕೊಂಡಾಡಿದೆ. ಈ ಹಿಂದೆ ಸ್ಪಾ್ಯನಿಶ್‌ ಪ್ಹ್ಲು ಬಂದಿತ್ತು. ಅದು ಗಂಭೀರವಲ್ಲದ ಕಾಯಿಲೆ ಆಗಿದ್ದರೂ ಹಸಿವಿನಿಂದಲೇ ಸಾವಿರಾರು ಮಂದಿ ಸಾವನ್ನಪ್ಪುವಂತೆ ಮಾಡಿತ್ತು. ಆದರೆ, ಎಂಟು ತಿಂಗಳಿಂದ ಗರೀಬ್‌ ಕಲ್ಯಾಣ ಯೋಜನೆಯಡಿ ಮೋದಿ ಉಚಿತವಾಗಿ ಆಹಾರ ಧಾನ್ಯ ನೀಡಿದ್ದಾರೆ. ಈ ಮೂಲಕ ಒಬ್ಬರೂ ಹಸಿವಿನಿಂದ ಸಾಯದಂತೆ ನೋಡಿಕೊಂಡಿದ್ದಾರೆ. ಇದು ನರೇಂದ್ರ ಮೋದಿ ಸರ್ಕಾರದ ಬಲ. ಅಷ್ಟುಮಾತ್ರವಲ್ಲ, ಗ್ರಾಮೀಣ ಸಡಕ್‌, ಕೃಷಿ ಸಮ್ಮಾನ್‌, ಆಯುಷ್ಮಾನ್‌ ಭಾರತ್‌ ಯೋಜನೆಗಳಿಗೆ ಪ್ರಥಮ ಬಾರಿಗೆ ನೇರ ನಗದು ಪಾವತಿ ಮಾಡಿದ್ದಾರೆ ಎಂದರು.

Raksha Deshpande

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

12 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

28 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

47 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

52 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago