ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ- ಡಿ.ಕೆ.ಶಿವಕುಮಾರ್

ಬೆಂಗಳೂರು: ನಮ್ಮದೇನಿದ್ದರೂ ಸಂಪೂರ್ಣ ಬಹುಮತದೊಂದಿಗೆ ಮುಂದಿನ ಬಾರಿ ಅಧಿಕಾರಕ್ಕೆ ಬರುವುದು . ಕಾರ್ಯಕರ್ತರ ಜತೆ ನಿಂತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನನ್ನ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷವನ್ನು ನಾನು ಮಾತ್ರ ಕಟ್ಟಿಲ್ಲ. ಹಳ್ಳಿ – ಹಳ್ಳಿಯ ಲಕ್ಷಾಂತರ ಜನ, ಕಾರ್ಯಕರ್ತರು ಈ ಪಕ್ಷ ಕಟ್ಟಿದ್ದು, ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದೇ ತಮ್ಮ ಗುರಿ .

ಸಲೀಂ ಹಾಗೂ ವಿ.ಎಸ್ ಉಗ್ರಪ್ಪ ಅವರ ಸಂಭಾಷಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾರನ್ನೂ ಈ ಬಗ್ಗೆ ದೂರುವುದಿಲ್ಲ. ನನ್ನ ಬಗ್ಗೆ ಯಾರು, ಹೇಗೆ ಬೇಕೋ ಹಾಗೆ ಮಾತನಾಡಿದ್ದಾರೆ. ಅದನ್ನು ಯಾರು ಯಾವ ರೀತಿ ಬಳಸಿಕೊಳ್ಳಬೇಕೋ, ಬಳಸಿಕೊಂಡಿದ್ದಾರೆ. ನಾನು ಈ ಬಗ್ಗೆ ಬಿಜೆಪಿ ಪಕ್ಷ ಅಥವಾ ಮಾಧ್ಯಮಗಳನ್ನಾಗಲಿ ದೂಷಿಸುವುದಿಲ್ಲ. ನಾವು ಅವಕಾಶ ಕೊಟ್ಟಿದ್ದರಿಂದ ಬೇರೆಯವರು ಅದನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Swathi MG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

13 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

24 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

32 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

34 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

46 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

55 mins ago