News Karnataka Kannada
Sunday, April 28 2024
ಬೆಂಗಳೂರು

ಜಮೀರ್ ಅಹಮ್ಮದ್, ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ

Jameer Ahmadh Khan It Bng 05082021
Photo Credit :

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ‌ ಮೇಲೆ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ಆದಾಯ ತೆರಿಗೆ ಅಧಿಕಾರಿಗಳು ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ನಡೆಯುಸುತ್ತಿದ್ದಾರೆ. .

ತೆರಿಗೆ ವಂಚನೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.  ಬೆಳಿಗ್ಗೆ ಆರು ಗಂಟೆ ಸುಮಾರಿಗೆ ದಾಳಿ ಆರಂಭವಾಗಿದೆ. ದಾಖಲೆ ಪತ್ರಗಳ ತಪಾಸಣೆ ನಡೆಯುತ್ತಿದೆ

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ಶಿವಾಜಿನಗರದಲ್ಲಿನ ಅವರ ಮನೆ ಸೇರಿ 6 ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಇ.ಡಿ. ಅಧಿಕಾರಿಗಳು ಶೋಧ ಆರಂಭಿಸಿದ್ದಾರೆ. ಸಿಆರ್‌ಪಿಎಫ್ ಪೊಲೀಸರ ಭದ್ರತೆ ಪಡೆದು ದಾಳಿ ನಡೆಸಲಾಗಿದೆ. ‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು