News Karnataka Kannada
Friday, May 03 2024
ಬೆಂಗಳೂರು

ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಮೂರ್ತಿಯನ್ನು ನೋಡಬೇಕು ಅನಿಸಿದೆ : ಹೆಚ್​.ಡಿ. ದೇವೇಗೌಡ

Deve Gowda 12082021
Photo Credit :

‘ನನಗೆ ನೀವು (ಪ್ರಧಾನ ಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ’ ಹೀಗೆ ಅಂದಿದ್ದು, ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ಇಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕೇದಾರನಾಥದಲ್ಲಿನ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಹೆಚ್​.ಡಿ. ದೇವೇಗೌಡ ಪತ್ರದ ಮುಖೇನ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಪತ್ರ…..
‘ನಾನು ಕರ್ನಾಟಕದಲ್ಲಿನ ಚಿಕ್ಕಮಗಳೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಅದು ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ನಾಲ್ಕು ಕೇಂದ್ರಗಳಲ್ಲಿ ಒಂದಾಗಿದೆ. ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ದೇವೇಗೌಡ ಶೃಂಗೇರಿ ಮಠದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಧರ್ಮ ಕ್ಷೇತ್ರದ ಮಾರ್ಗದರ್ಶನವು ಇಂದಿನ ದಿನದ ವರೆಗೂ ಮುಂದುವರಿದಿದೆ. ಶೃಂಗೇರಿ ಮಠ, ವೈಯಕ್ತಿಕವಾಗಿ ನನಗೆ ಸಮಾಜದ ಸಾಮರಸ್ಯದ ಕೇಂದ್ರವಾಗಿ ಕಂಡಿದೆ. ಈ ಪವಿತ್ರ ಕ್ಷೇತ್ರದಿಂದ ನನ್ನ ಜೀವನದಲ್ಲಿ ಪಡೆದುಕೊಂಡ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿ ಇರುತ್ತೇನೆ ಎಂದು ದೇವೇಗೌಡ ತಿಳಿಸಿದ್ದಾರೆ.

ಶೀಘ್ರವೇ ಕೇದಾರನಾಥಕ್ಕೆ ಭೇಟಿ ಕೊಟ್ಟು, ಹೊಸತಾಗಿ ಉದ್ಘಾಟಿಸಿರುವ ಶಂಕರಾಚಾರ್ಯರ ಪ್ರತಿಮೆ ನೋಡಬೇಕು ಎಂದು ಕಾತುರನಾಗಿದ್ದೇನೆ. ಆ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬವರು ರಚಿಸಿದ್ದಾರೆ ಎಂಬುದು ಸಂತೋಷಕ್ಕೆ ಹೆಚ್ಚಿನ ಕಾರಣವಾಗಿದೆ.

ಪ್ರತಿಮೆ ರಚನೆಗೆ ಬಳಸಿದ ಕಪ್ಪು ಶಿಲೆ ಮೈಸೂರಿನ ಹೆಚ್​.ಡಿ. ಕೋಟೆಯದ್ದು ಎಂದು ತಿಳಿದುಕೊಂಡಿದ್ದೇನೆ. ಈ ಕಾರ್ಯದಲ್ಲಿ ಕರ್ನಾಟಕದ ಭಾಗವೂ ಬಹಳಷ್ಟಿದೆ. ಭಗವಂತನ ಆಶೀರ್ವಾದ ನಿಮ್ಮ ಮೇಲಿರಲಿ ಎಂದು ದೇವೇಗೌಡರು ಮೋದಿಗೆ ಶುಭ ಹಾರೈಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು