News Karnataka Kannada
Friday, May 17 2024
ಬೆಂಗಳೂರು

ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ: ಕರ್ನಾಟಕದಲ್ಲಿ ಅಲರ್ಟ್ ಆಗಿರುವಂತೆ ಸಚಿವ ಅಶೋಕ್ ಸೂಚನೆ

Photo Credit :

ಬೆಂಗಳೂರು : ಕೇರಳದಲ್ಲಿ ಅಕ್ಟೋಬರ್ 25ರವರೆಗೂ ಕೇರಳದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆ ಕರ್ನಾಟಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿಸಲಾಗಿದೆ. ಕೊಟ್ಟಾಯಂ, ಇಡುಕ್ಕಿ, ಪಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಪಥನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಈ ಕುರಿತು ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮಳೆ ಅವಾಂತರದಿಂದ ಉಂಟಾಗುವ ಯಾವುದೇ ಸವಾಲು ಎದುರಿಸಲು ಸನ್ನದ್ದರಾಗಿರುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು