News Karnataka Kannada
Monday, April 29 2024
ಬೆಂಗಳೂರು

ಕೇರಳ ಪ್ರವಾಸ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ ಸರ್ಕಾರ

Vidhanaswada 15082021
Photo Credit :
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ನಿಫ್ರಾ ವೈರಸ್‌ (ಎನ್‌ಐವಿ) ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸಲಾಗಿದೆ.
ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿಯನ್ನು ಪರಿಗಣಿಸಿ ಈ ಮಾರ್ಗಸೂಚಿ ಹೊರಡಿಸಲಾಗಿದೆ.

ಕೇರಳ ಉದ್ಯೋಗಿಗಳು ಅಕ್ಟೋಬರ್ ಅಂತ್ಯದವರೆಗೂ ಕರ್ನಾಟಕಕ್ಕೆ  ಬಾರದಂತೆ ಅಥವಾ ಮುಂದೂಡುವಂತೆ ಎಲ್ಲಾ ಆಡಳಿತ ಮಂಡಳಿ, ಶಿಕ್ಷಣ ಸಂಸ್ಥೆಗಳ ಪ್ರಿನ್ಸಿಪಾಲರು, ನರ್ಸಿಂಗ್, ಪ್ಯಾರಾ ಮೆಡಿಕಲ್ ಸಂಸ್ಥೆಗಳು, ಆಸ್ಪತ್ರೆಗಳ ಮಾಲೀಕರು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೋಟೆಲ್ ಗಳು, ಕಾರ್ಖಾನೆಗಳು, ಕೈಗಾರಿಕೆಗಳು ಮತ್ತಿತರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು