ಬೆಂಗಳೂರು : ರಾಜಕಾರಣಿಗಳು, ಸಿನಿಮಾ ತಾರೆಗಳ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣ ಪೀಕುವ ಘಟನೆಗಳು ಹೆಚ್ಚಾಗುತ್ತಲ್ಲೇ ಇದ್ದು, ಇದೀಗ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಖಾತೆ ತೆರೆದು ಹಣದ ಬೇಡಿಕೆ ಇಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆ ಸೃಷ್ಟಿಸಿ ನಾನು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸಿದ್ದಾರೆ.
ಇದು ಸಂಪೂರ್ಣವಾಗಿ ಸುಳ್ಳು. ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ. ಈ ಕುರಿತು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ.