ಬೆಂಗಳೂರು

ಕೊರೊನಾ ಬಗ್ಗೆ ಜನರಲ್ಲಿ ಆತಂಕ

ಬೆಂಗಳೂರು: ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ನಿರಾಳವಾಗಿರುವ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಬಿಟ್ಟು, ಜನ ಜೀವನ ಸಹಜ ಸ್ಥಿತಿಗೆ ಮರಳಲು ಅನುವು ಮಾಡಿಕೊಟ್ಟಿದೆ.ರಾಜ್ಯ ಸರ್ಕಾರ ನೈಟ್‍ಕಫ್ರ್ಯೂ ತೆರವು ಮಾಡಿದೆ. ಮದುವೆ, ಸಭೆ, ಸಮಾರಂಭಗಳಿಗೆ ನಿಗದಿ ಪಡಿಸಲಾಗಿದ್ದ ಜನ ಸೇರ್ಪಡೆಯ ಮಿತಿಯನ್ನು ಅನೌಪಚಾರಿಕವಾಗಿ ಸಡಿಲಗೊಳಿಸಲಾಗಿದೆ. ಮಾಲು, ಥಿಯೇಟರುಗಳು ಶುರುವಾಗಿವೆ. ಕಳೆದ 15 ದಿನಗಳಿಂದ ಭಾಗಶಃ ತೆರೆದಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗುತ್ತಿವೆ. ವಾಣಿಜ್ಯ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳುತ್ತಿವೆ.

ಕೇರಳದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಹಾಸನಗಳಲ್ಲಿ ಒಂದಿಷ್ಟು ಪ್ರಕರಣಗಳು ಹೆಚ್ಚಾದವಾದರೂ ಅವು ಅಪಾಯಕಾರಿ ಮಟ್ಟ ಮೀರಲಿಲ್ಲ. ಲಸಿಕೆ ಅಭಿಯಾನ ಯಶಸ್ವಿಯಾಗಿದ್ದು, ಸೋಂಕಿನ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂಬ ವಿಶ್ವಾಸ ಮೂಡಿದೆ. ಹೀಗಾಗಿ ತಜ್ಞರು ಕೂಡ ಕೋವಿಡ್ ವಿರುದ್ಧ ನಿರ್ಬಂಧಗಳ ಸಡಿಲಿಕೆ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ. ಸರ್ಕಾರದ ಮೂಲಗಳ ಪ್ರಕಾರ ಸೋಂಕಿನ ಏರಿಳಿತಗಳ ಬಗ್ಗೆ ನಿಗಾವಹಿಸಲಾಗಿದೆ.

ಆದರೆ, ಅನಿರೀಕ್ಷಿತವಾಗಿ ಎದುರಾಗುವ ಅಗೋಚರ ಶತ್ರುವಿನ ಬಗ್ಗೆ ಜನ ಸಾಮಾನ್ಯರಲ್ಲಿ ಅವ್ಯಕ್ತವಾದ ಆತಂಕ ಈಗಲೂ ಮನೆ ಮಾಡಿದೆ.ಬಸ್, ರೈಲುಗಳಲ್ಲಿ ಜನ ಕಿಕ್ಕಿರಿದು ಪ್ರಯಾಣಿಸುತ್ತಿದ್ದಾರೆ. ಕೋವಿಡ್ ವಿರುದ್ಧದ ಎಲ್ಲಾ ಅಸ್ತ್ರಗಳನ್ನು ಸರ್ಕಾರ ಕೆಳಗಿಟ್ಟಿದೆ. ಕಳೆದ ಒಂದು ತಿಂಗಳಿನಿಂದಲೂ ಸೋಂಕಿತರ ಪ್ರಮಾಣ 500ರ ಒಳಗೆ ಇರುವುದು ಸಮಾಧಾನದ ವಿಷಯ. ಕೇರಳ, ಮಹಾರಾಷ್ಟ್ರ, ಪಶ್ಚಿಮಬಂಗಾಳ ಸೇರಿದಂತೆ ಕೆಲವು ಕಡೆ ಸೋಂಕು ಹೆಚ್ಚಾಗಿದ್ದರೂ ಕರ್ನಾಟಕದ ಮೇಲೆ ಅದು ಯಾವುದೇ ಪರಿಣಾಮ ಬೀರಲಿಲ್ಲ.

ಯಾವುದೇ ಕ್ಷಣದಲ್ಲಿ ಸೋಂಕು ಕೈ ಮೀರಿದರೂ ಅದನ್ನು ಹತೋಟಿಗೆ ತರಲು ತಾಲ್ಲೂಕು ಕೇಂದ್ರಗಳಿಂದಲೂ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸಲಾಗಿದೆ. ಮೂರನೆ ಅಲೆ ಮಕ್ಕಳನ್ನು ಬಾಸಲಿದೆ ಎಂಬ ಕಾರಣಕ್ಕಾಗಿ ತಾಲ್ಲೂಕು ಕೇಂದ್ರಗಳಲ್ಲಿ ಐಸಿಯು, ಆಯಕ್ಸಿಜನ್ ಘಟಕಗಳನ್ನು ಆರಂಭಿಸಿ ಮಕ್ಕಳ ಚಿಕಿತ್ಸಾ ಕೇಂದ್ರಗಳನ್ನೂ ಸ್ಥಾಪಿಸಲಾಗಿತ್ತು. ಸದ್ಯಕ್ಕೆ ಎಲ್ಲವೂ ಧೂಳು ತಿನ್ನುತ್ತಿವೆ.

ಲಸಿಕೀಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುಶಃ ಸೋಂಕು ಹೆಚ್ಚು ಬಾಸುವುದಿಲ್ಲ ಎಂಬ ನಿರೀಕ್ಷೆಗಳಿವೆ. ಒಂದು ವೇಳೆ ಮೂರನೆ ಅಲೆ ಅಥವಾ ರೂಪಾಂತರ ಸೋಂಕುಗಳು ವೃದ್ಧಿಯಾದರೆ ಅದನ್ನು ನಿಯಂತ್ರಿಸಲು ಆರೋಗ್ಯ ಮೂಲ ಸೌಕರ್ಯಗಳು ತಯಾರಿವೆ. ಜನ ಸಾಮಾನ್ಯರು ಆತಂಕಗೊಳ್ಳುವ ಅಗತ್ಯ ಇಲ್ಲ ಎಂಬ ಸಮರ್ಥನೆಗಳು ಸರ್ಕಾರದಿಂದ ಕೇಳಿ ಬರುತ್ತಿವೆ.

ಆದರೆ, ಸರ್ಕಾರ ಏನೇ ಹೇಳಿದರು ಒಂದು ಮತ್ತು ಎರಡನೇ ಅಲೆಯಲ್ಲಿ ಸಾಕಷ್ಟು ದುಷ್ಪರಿಣಾಮಗಳನ್ನು ಎದುರಿಸುವ ಜನಸಾಮಾನ್ಯರು ಒಳಗೊಳಗೆ ದುಗುಡದಲ್ಲಿರುವುದು ಕಂಡು ಬರುತ್ತಿದೆ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ.

ರಷ್ಯಾ, ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಜನ ತೊಂದರೆಗೆ ಸಿಲುಕಿದ್ದಾರೆ. ಭಾರತದಲ್ಲಿ ಅಂತಹ ಪರಿಸ್ಥಿತಿ ಇಲ್ಲ ಎಂಬ ಕಾರಣಕ್ಕೆ ನಿರ್ಲಕ್ಷಿಸುತ್ತಿರುವುದು ಆಕ್ಷೇಪಕ್ಕೆ ಗುರಿಯಾಗುತ್ತಿದೆ. ಕೊರೊನಾ ಅಗೋಚರ ಶತ್ರುವಾಗಿದ್ದು, ಯಾವಾಗ, ಯಾವ ರೂಪದಲ್ಲಿ, ಎಂಥಹ ರೂಪಾಂತರದಲ್ಲಿ ಬಂದರೆಗಲಿದೆ ಎಂಬ ನಿರ್ದಿಷ್ಟ ಮಾಹಿತಿಗಳು ಇರುವುದಿಲ್ಲ. ಹಾಗಾಗಿ ಸದಾ ಕಾಲ ಎಚ್ಚರಿಕೆಯೊಂದೇ ಅದಕ್ಕೆ ಮದ್ದು.

ಆದರೆ, ಸರ್ಕಾರವೇ ಎಚ್ಚರಿಕೆಯ ಮಾರ್ಗಸೂಚಿಗಳನ್ನು ಮೂಲೆಗುಂಪು ಮಾಡುತ್ತಿವೆ. ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವನ್ನು ನಿರ್ಧರಿಸುವ ಆರ್ ವ್ಯಾಲ್ಯೂ ಒಂದಕ್ಕಿಂತಲೂ ಹೆಚ್ಚಿರುವ ಆತಂಕದ ವರದಿ ಬಂದ ಮೇಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago