ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ರಾಜ್ಯದ ಜನರಿಗೆ ಇಂದು ನೆಮ್ಮದಿಯ ಸುದ್ದಿಯೆನ್ನುವಂತೆ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯನ್ನು ಕಂಡಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 290 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರೇ, ಸೋಂಕಿನಿಂದ 10 ಜನರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ರಾಯಚೂರು, ರಾಮನಗರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದೆ.

ಬೆಳಗಾವಿ 01, ಬೆಂಗಳೂರು ಗ್ರಾಮಾಂತರ 02, ಚಾಮರಾಜನಗರ 02, ಚಿಕ್ಕಮಗಳೂರು 06, ಚಿತ್ರದುರ್ಗ 01, ಧಾರವಾಡ 02, ಕಲಬುರ್ಗಿ 03, ಕೋಲಾರ ಮತ್ತು ಕೊಡಗು 07, ಮಂಡ್ಯ 04, ಶಿವಮೊಗ್ಗ 03, ಉಡುಪಿ 04 ಕೇಸ್ ಪತ್ತೆಯಾಗಿವೆ.

ಬೆಂಗಳೂರು 137, ದಕ್ಷಿಣ ಕನ್ನಡ 30, ಹಾಸನ 20, ಮೈಸೂರು 18, ತುಮಕೂರು 26, ಉತ್ತರ ಕನ್ನಡ 15 ಸೇರಿದಂತೆ ರಾಜ್ಯಾಧ್ಯಂತ 290 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದ ಸೋಂಕಿತರಸ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ. ಇಂದು 408 ಸೇರಿದಂತೆ ಇದುವರೆಗೆ 29,39,647 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 8,583 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಧಾರವಾಡ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರು, ಬೆಂಗಳೂರು ನಗರದಲ್ಲಿ ಆರು ಜನರು ಸೇರಿದಂತೆ 10 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 38,017ಕ್ಕೆ ಏರಿಕೆಯಾಗಿದೆ.

Gayathri SG

Recent Posts

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

3 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

24 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

46 mins ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

58 mins ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

1 hour ago

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

2 hours ago