ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ 1,350 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,37,427ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 18 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,123ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 260 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,769ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,648 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,79,433ಕ್ಕೆ ಏರಿಕೆಯಾಗಿದೆ. ಇನ್ನು 20,845 ಸಕ್ರೀಯ ಪ್ರಕರಣಗಳಿವೆ. ರಾಜ್ಯದ ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
ರಾಜ್ಯಾದ್ಯಂತ ಇಂದು 1,57,509 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,350 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.85ಕ್ಕೆ ಇಳಿದಿದೆ.