ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ 1,453 ಕೋವಿಡ್ ಪ್ರಕರಣ ಪತ್ತೆಯಾಗಿದೆ. 1,408 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಕಳೆದ 24 ಗಂಟೆಯಲ್ಲಿ 1,453 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,33,192ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,105ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 352 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,34,509ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,77,785ಕ್ಕೆ ಏರಿಕೆಯಾಗಿದೆ. ಇನ್ನು 21,161 ಸಕ್ರೀಯ ಪ್ರಕರಣಗಳಿವೆ.